No menu items!
18.6 C
Munich
Wednesday, April 29, 2026

ಹುಬ್ಬಳ್ಳಿಯಲ್ಲಿ ಬಸ್–ಬೈಕ್ ಅಪಘಾತ: ಇಬ್ಬರು ದಾರುಣ ಸಾವು, ಮಗು ಗಂಭೀರ

Must read

ಹುಬ್ಬಳ್ಳಿಯಲ್ಲಿ ಬಸ್–ಬೈಕ್ ಅಪಘಾತ: ಇಬ್ಬರು ದಾರುಣ ಸಾವು, ಮಗು ಗಂಭೀರ

ಹುಬ್ಬಳ್ಳಿ: ಬಸ್ ಡಿಕ್ಕಿಯಾಗಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಗ್ರಾಮದ ಬಳಿ ನಡೆದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಬಸ್ ಓವರ್‌ಟೇಕ್ ಮಾಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಬೈಕ್‌ನಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಅವರೊಂದಿಗೆ ಇದ್ದ ಮಗು ಗಂಭೀರವಾಗಿ ಗಾಯಗೊಂಡಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ವಿವರಗಳನ್ನು ಸಂಗ್ರಹಿಸುವ ಕಾರ್ಯ ಮುಂದುವರಿದಿದೆ.

- Advertisement -spot_img

More articles

- Advertisement -spot_img

Latest article