ಭೀಕರ ಅಪಘಾತ: ಶಬರಿಮಲೆಗೆ ಹೋಗಿ ಬರುತ್ತಿದ್ದ ನಾಲ್ವರು ಸ್ಥಳದಲ್ಲೇ ಸಾವು

Date:

ಭೀಕರ ಅಪಘಾತ: ಶಬರಿಮಲೆಗೆ ಹೋಗಿ ಬರುತ್ತಿದ್ದ ನಾಲ್ವರು ಸ್ಥಳದಲ್ಲೇ ಸಾವು

ತುಮಕೂರು: ತುಮಕೂರು ಜಿಲ್ಲೆಯ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.
ಕ್ರೂಸರ್ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಅಯ್ಯಪ್ಪ ಭಕ್ತರು ಮೃತಪಟ್ಟಿದ್ದು, ಅವರಲ್ಲಿ ಒಬ್ಬ ಬಾಲಕಿ ಕೂಡ ಸೇರಿದ್ದಾಳೆ. ಅಪಘಾತದಲ್ಲಿ ಇನ್ನೂ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಮೃತರನ್ನು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ನಿವಾಸಿಗಳೆಂದು ಗುರುತಿಸಲಾಗಿದೆ. ಮೃತಪಟ್ಟವರು ಸಾಕ್ಷಿ (7), ವೆಂಕಟೇಶಪ್ಪ (30), ಮಾರತಪ್ಪ (35) ಹಾಗೂ ಗವಿಸಿದ್ದಪ್ಪ (40) ಎಂದು ಗುರುತಿಸಲಾಗಿದೆ. ಗಾಯಗೊಂಡವರಲ್ಲಿ ಪ್ರಶಾಂತ್ (32), ಪ್ರವೀಣ್ ಕುಮಾರ್ (28), ರಾಜಪ್ಪ (45), ಉಲಗಪ್ಪ (32), ರಾಕೇಶ್ (24), ತಿರುಪತಿ (33) ಮತ್ತು ಶ್ರೀನಿವಾಸ್ (32) ಸೇರಿದ್ದಾರೆ.
ಶಬರಿಮಲೆ ಅಯ್ಯಪ್ಪ ದರ್ಶನ ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕ್ರೂಸರ್ನಲ್ಲಿ ಒಟ್ಟು 12 ಮಂದಿ ಪ್ರಯಾಣಿಸುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕನ್ನಡ ಶಾಲೆಗಳಲ್ಲಿ ಮಲೆಯಾಳ ಹೇರಿಕೆ ಖಂಡನೀಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಕನ್ನಡ ಶಾಲೆಗಳಲ್ಲಿ ಮಲೆಯಾಳ ಹೇರಿಕೆ ಖಂಡನೀಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬೆಂಗಳೂರು:...

ಚಿಕ್ಕಬಳ್ಳಾಪುರ ಎಪಿಎಂಸಿಯಲ್ಲಿ ಟೊಮೇಟೊ ಬೆಲೆ ಭಾರೀ ಕುಸಿತ; ರೈತರಿಗೆ ಮತ್ತೆ ಸಂಕಷ್ಟ

ಚಿಕ್ಕಬಳ್ಳಾಪುರ ಎಪಿಎಂಸಿಯಲ್ಲಿ ಟೊಮೇಟೊ ಬೆಲೆ ಭಾರೀ ಕುಸಿತ; ರೈತರಿಗೆ ಮತ್ತೆ ಸಂಕಷ್ಟ ಚಿಕ್ಕಬಳ್ಳಾಪುರ:...

ರಾಜ್ಯದಲ್ಲಿ ಚಳಿ ಹೆಚ್ಚಳ: ಬೀದರ್, ಕಲಬುರಗಿ, ವಿಜಯಪುರಕ್ಕೆ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಚಳಿ ಹೆಚ್ಚಳ: ಬೀದರ್, ಕಲಬುರಗಿ, ವಿಜಯಪುರಕ್ಕೆ ಯೆಲ್ಲೋ ಅಲರ್ಟ್ ಬೆಂಗಳೂರು: ರಾಜ್ಯದಲ್ಲಿ...

ಚಿಕ್ಕಬಳ್ಳಾಪುರ ಎಪಿಎಂಸಿಯಲ್ಲಿ ಟೊಮೇಟೊ ಬೆಲೆ ಭಾರೀ ಕುಸಿತ; ರೈತರಿಗೆ ಮತ್ತೆ ಸಂಕಷ್ಟ

ಚಿಕ್ಕಬಳ್ಳಾಪುರ ಎಪಿಎಂಸಿಯಲ್ಲಿ ಟೊಮೇಟೊ ಬೆಲೆ ಭಾರೀ ಕುಸಿತ; ರೈತರಿಗೆ ಮತ್ತೆ ಸಂಕಷ್ಟ ಚಿಕ್ಕಬಳ್ಳಾಪುರ:...