No menu items!
18.2 C
Munich
Tuesday, April 28, 2026

ಕನ್ನಡ ಶಾಲೆಗಳಲ್ಲಿ ಮಲೆಯಾಳ ಹೇರಿಕೆ ಖಂಡನೀಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

Must read

ಕನ್ನಡ ಶಾಲೆಗಳಲ್ಲಿ ಮಲೆಯಾಳ ಹೇರಿಕೆ ಖಂಡನೀಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಬೆಂಗಳೂರು: ಕರ್ನಾಟಕ ಗಡಿ ಭಾಗದಲ್ಲಿರುವ ಕೇರಳ ರಾಜ್ಯದ ಪ್ರದೇಶದಲ್ಲಿ ಕನ್ನಡ ಶಾಲೆಗಳ ಮೇಲೆ ಮಲೆಯಾಳ ಭಾಷೆಯನ್ನು ಒತ್ತಾಯಪೂರ್ವಕವಾಗಿ ಹೇರುವ ಪ್ರಯತ್ನಕ್ಕೆ ಅಲ್ಲಿನ ಕಮ್ಯುನಿಸ್ಟ್ ಪಕ್ಷದ ಸರ್ಕಾರ ಕೈ ಹಾಕಿರುವುದು ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.
ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ವಿಷಯದಲ್ಲಿ ಬಿಜೆಪಿ ಪ್ರಬಲವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದು, ಹಲವು ಕನ್ನಡಪರ ಸಂಘಟನೆಗಳೂ ಕೂಡ ಮಲೆಯಾಳ ಹೇರಿಕೆಯನ್ನು ಖಂಡಿಸಿವೆ ಎಂದು ಹೇಳಿದರು. ಕೇರಳದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವ ವಿಚಾರದಲ್ಲಿ ಕೇವಲ ಹೇಳಿಕೆ ನೀಡುವುದೋ ಅಥವಾ ಪತ್ರ ಬರೆಯುವುದೋ ಸಾಕಾಗುವುದಿಲ್ಲ. ಕರ್ನಾಟಕ ಸರ್ಕಾರ ಈ ವಿಷಯದಲ್ಲಿ ಗಟ್ಟಿ ನಿಲುವು ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಕರ್ನಾಟಕದ ವಿಚಾರಗಳಲ್ಲಿ ಪದೇಪದೇ ಮೂಗು ತೂರಿಸುತ್ತಿದ್ದಾರೆ ಎಂದು ವಿಜಯೇಂದ್ರ ಟೀಕಿಸಿದರು. “ನಿಮ್ಮ ಕೆ.ಸಿ. ವೇಣುಗೋಪಾಲ್ ಅವರ ಕಿವಿ ಹಿಂಡಿ, ಕನ್ನಡಿಗರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು. ಕೇರಳದಲ್ಲಿರುವ ಕನ್ನಡ ಶಾಲೆಗಳ ರಕ್ಷಣೆ ಮಾಡುವುದು ಮತ್ತು ಮಲೆಯಾಳ ಹೇರಿಕೆಗೆ ಅವಕಾಶ ನೀಡದಿರುವ ಹೊಣೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಮೇಲಿದೆ” ಎಂದು ಹೇಳಿದರು.

- Advertisement -spot_img

More articles

- Advertisement -spot_img

Latest article