ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ

Date:

ಕಾಂಗ್ರೆಸ್ ನ ಕುರ್ಚಿ ಕಾದಾಟದಿಂದ ರಾಜ್ಯಕ್ಕೆ ಅಭಿವೃದ್ಧಿ ಇಲ್ಲ: ಬಿ.ವೈ. ವಿಜಯೇಂದ್ರ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ, ಕಾಂಗ್ರೆಸ್ ಪಕ್ಷದ ಆಂತರಿಕ ಕುರ್ಚಿ ಕಾದಾಟದ ಕಾರಣ ರಾಜ್ಯದ ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ತೀವ್ರ ಟೀಕೆ ನಡೆಸಿದರು. ರಾಜ್ಯದಲ್ಲಿ ನಿಜವಾದ ಅಭಿವೃದ್ಧಿ ನಡೆಯುತ್ತಿಲ್ಲ; ಕಾಂಗ್ರೆಸ್ ಆಡಳಿತದ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ ಎಂದು ಹೇಳಿದರು.
ನಿನ್ನೆ ಜರ್ಮನಿಯ ಚಾನ್ಸೆಲರ್ ಕರ್ನಾಟಕಕ್ಕೆ ಭೇಟಿ ನೀಡಿದ್ದನ್ನು ಉಲ್ಲೇಖಿಸಿದ ವಿಜಯೇಂದ್ರ, ಜರ್ಮನಿಯು ಉತ್ಪಾದನಾ ಹಬ್ ಆಗಿರುವ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವ ದೇಶ. ಅಂಥ ದೇಶದ ಚಾನ್ಸೆಲರ್ ರಾಜ್ಯಕ್ಕೆ ಬಂದ ಸಂದರ್ಭದಲ್ಲಿ, ಕಾಂಗ್ರೆಸ್ನ ಒಬ್ಬರು ಸಿಎಂ ಕುರ್ಚಿ ಉಳಿಸಿಕೊಳ್ಳಲು, ಮತ್ತೊಬ್ಬರು ಅದೇ ಕುರ್ಚಿ ಕಸಿದುಕೊಳ್ಳಲು ಯತ್ನಿಸಿ ರಾಹುಲ್ ಗಾಂಧಿ ಜೊತೆ ನಿಂತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯದ ಸ್ಥಿತಿ ಹೇಗಿರಬೇಕು ಎಂದು ಪ್ರಶ್ನಿಸಿದರು.
ಈ ಎಲ್ಲ ಬೆಳವಣಿಗೆಗಳನ್ನು ರಾಜ್ಯದ ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಬರುವ ದಿನಗಳಲ್ಲಿ ಜನರು ಕಾಂಗ್ರೆಸ್ಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಕಾಂಗ್ರೆಸ್ನಲ್ಲಿ ತೀವ್ರ ಆಂತರಿಕ ಕಚ್ಚಾಟವಿದ್ದು, ಒಬ್ಬರು ಕುರ್ಚಿ ಉಳಿಸಿಕೊಳ್ಳಲು ಕಾತುರದಲ್ಲಿದ್ದಾರೆ, ಇನ್ನೊಬ್ಬರು ಸಿಎಂ ಆಗಲು ಸಜ್ಜಾಗಿದ್ದಾರೆ ಎಂದು ವ್ಯಂಗ್ಯವಾಡಿದರು.
ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ಅವರು, ಬಳ್ಳಾರಿ ಪಾದಯಾತ್ರೆ ಕುರಿತು ಮಾತನಾಡಿ, ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಮಾತ್ರವಲ್ಲದೆ ರಾಜ್ಯದ ಹಲವಾರು ಪ್ರಮುಖರೊಂದಿಗೆ ಚರ್ಚಿಸಿದಾಗ, ಎಲ್ಲರೂ ಬಳ್ಳಾರಿಯಲ್ಲಿ ಪಾದಯಾತ್ರೆ ನಡೆಸುವುದು ಒಳ್ಳೆಯದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು. ಈ ಕುರಿತು ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಬೇಕಿದ್ದು, ಈಗಾಗಲೇ ದೆಹಲಿ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದೇನೆ. ಇವತ್ತು ಅಥವಾ ನಾಳೆಯೊಳಗೆ ಈ ಬಗ್ಗೆ ಸ್ಪಷ್ಟ ಸಂದೇಶ ಬರಲಿದೆ ಎಂದು ವಿಜಯೇಂದ್ರ ತಿಳಿಸಿದರು.

Share post:

Subscribe

spot_imgspot_img

Popular

More like this
Related

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು

ವಾಲ್ಮೀಕಿ ಹಗರಣದಲ್ಲಿ ಬಿ. ನಾಗೇಂದ್ರಗೆ ರಿಲೀಫ್: ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ವಾಲ್ಮೀಕಿ...

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ರಾಹುಲ್ ಗಾಂಧಿ ಭೇಟಿ ಶಿಷ್ಟಾಚಾರದ ಭಾಗ ಮಾತ್ರ – ಗೊಂದಲ ಸೃಷ್ಟಿಸಬೇಡಿ:...

ತೀರ್ಥಹಳ್ಳಿ ಬಳಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು

ತೀರ್ಥಹಳ್ಳಿ ಬಳಿ ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ಸಾವು ಶಿವಮೊಗ್ಗ: ಶಿವಮೊಗ್ಗ...