ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

Date:

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಬೀದರ್: ಕಲ್ಯಾಣ ಕರ್ನಾಟಕದ ಧೀಮಂತ ನಾಯಕ, ಸಹಕಾರಿ ಧುರೀಣ, ವೀರಶೈವ ಲಿಂಗಾಯತ ಸಮುದಾಯದ ಹಿರಿಯ ಮುಖಂಡ, ಮುತ್ಸದ್ದಿ ರಾಜಕಾರಣಿ ಹಾಗೂ ಮಾಜಿ ಸಾರಿಗೆ ಸಚಿವರಾದ ಶತಾಯುಷಿ ಲೋಕನಾಯಕ ಡಾ. ಭೀಮಣ್ಣ ಖಂಡ್ರೆ (103) ಅವರು ಶುಕ್ರವಾರ ರಾತ್ರಿ 10.50ರ ಸುಮಾರಿಗೆ ಲಿಂಗೈಕ್ಯರಾಗಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
ಕಳೆದ 10–12 ದಿನಗಳಿಂದ ವಯೋಸಹಜ ಕಾಯಿಲೆಗಳು ಹಾಗೂ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಡಾ. ಭೀಮಣ್ಣ ಖಂಡ್ರೆ ಅವರನ್ನು ಮೊದಲು ಬೀದರ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಭಾಲ್ಕಿಯಲ್ಲಿರುವ ನಿವಾಸದಲ್ಲೇ ಚಿಕಿತ್ಸೆ ಮುಂದುವರಿಸಲಾಗಿತ್ತು. ಇಂದು ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಸಚಿವ ಈಶ್ವರ ಬಿ. ಖಂಡ್ರೆ ಮಾಹಿತಿ ನೀಡಿದ್ದಾರೆ.
ಕಳೆದ ಒಂದು ವಾರದಿಂದ ನಾಡಿನ ವಿವಿಧ ಮಠಗಳ ಪೀಠಾಧಿಪತಿಗಳು, ಹರಚರ ಗುರುಮೂರ್ತಿಗಳು, ಸಚಿವರು, ಶಾಸಕರು, ಸಮಾಜದ ಗಣ್ಯರು, ವಿವಿಧ ಪಕ್ಷಗಳ ನಾಯಕರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸ್ವಯಂಪ್ರೇರಿತರಾಗಿ ಭಾಲ್ಕಿಗೆ ಆಗಮಿಸಿ ಅವರ ಆರೋಗ್ಯ ವಿಚಾರಿಸಿದ್ದರು. ಅನೇಕರು ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದರು.
103 ವರ್ಷಗಳ ಸಾರ್ಥಕ ಮತ್ತು ತುಂಬು ಜೀವನ ನಡೆಸಿದ್ದ ಡಾ. ಭೀಮಣ್ಣ ಖಂಡ್ರೆ ಅವರು ಇಂದು ಎಲ್ಲರನ್ನೂ ಅಗಲಿದ್ದಾರೆ. ಅವರಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹಾಗೂ ಬೀದರ್ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಮರ ಕುಮಾರ ಖಂಡ್ರೆ ಸೇರಿ ಇಬ್ಬರು ಪುತ್ರರು ಮತ್ತು ನಾಲ್ವರು ಪುತ್ರಿಯರಿದ್ದಾರೆ. ಇವರ ಮತ್ತೊಬ್ಬ ಪುತ್ರ ಮಾಜಿ ಶಾಸಕ ಡಾ. ವಿಜಯಕುಮಾರ್ ಖಂಡ್ರೆ ಅವರು 2019ರಲ್ಲಿ ನಿಧನರಾಗಿದ್ದರು.
ವೃತ್ತಿಯಲ್ಲಿ ವಕೀಲರಾಗಿದ್ದ ಡಾ. ಭೀಮಣ್ಣ ಖಂಡ್ರೆ ಅವರು ಬಡಜನರು ಹಾಗೂ ರೈತರಿಗೆ ನ್ಯಾಯ ದೊರಕಿಸುವ ಮೂಲಕ ಜನನಾಯಕರಾಗಿ ಹೊರಹೊಮ್ಮಿದರು. 1953ರಲ್ಲಿ ಭಾಲ್ಕಿ ಪುರಸಭೆಯ ಪ್ರಥಮ ಚುನಾಯಿತ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಸಾರ್ವಜನಿಕ ಜೀವನಕ್ಕೆ ಪ್ರವೇಶಿಸಿದರು.
1962ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ ಅವರು, ನಾಲ್ಕು ಬಾರಿ ಶಾಸಕರಾಗಿ ಹಾಗೂ ಎರಡು ಬಾರಿ ವಿಧಾನಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದರು. ಎಂ. ವೀರಪ್ಪ ಮೊಯ್ಲಿ ಅವರ ಸಚಿವ ಸಂಪುಟದಲ್ಲಿ ಸಾರಿಗೆ ಸಚಿವರಾಗಿ ಕಾರ್ಯನಿರ್ವಹಿಸಿದರು.
1976ರಲ್ಲಿ ಜನಸಂಖ್ಯೆ ನಿಯಂತ್ರಣ ಕಾರ್ಯಕ್ರಮದ ಹೆಸರಿನಲ್ಲಿ ನಡೆಯುತ್ತಿದ್ದ ಬಲವಂತದ ಸಂತಾನಹರಣ ಶಸ್ತ್ರಚಿಕಿತ್ಸೆಯನ್ನು ವಿರೋಧಿಸಿ, ಜನರಿಗೆ ಮನವೊಲಿಸಿ ಒಂದೇ ದಿನದಲ್ಲಿ 2,500ಕ್ಕೂ ಹೆಚ್ಚು ಜನರು ಸ್ವಯಂಪ್ರೇರಿತವಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವಂತೆ ಪ್ರೇರೇಪಿಸಿದ ದಾಖಲೆ ನಿರ್ಮಿಸಿದ್ದರು. ಒಂದೇ ದಿನ, ಒಂದೇ ನಗರದಲ್ಲಿ ನಡೆದ ಅತಿ ಹೆಚ್ಚು ಸಂತಾನಹರಣ ಶಸ್ತ್ರಚಿಕಿತ್ಸೆಯಾಗಿ ಈ ಘಟನೆ ಬಿಬಿಸಿಯಲ್ಲೂ ಪ್ರಸಾರವಾಗಿತ್ತು.
ಸಹಕಾರಿ ಕ್ಷೇತ್ರದ ಧುರೀಣರಾಗಿದ್ದ ಅವರು, ರೈತರ ಹಿತದೃಷ್ಟಿಯಿಂದ ಹಳ್ಳಿಖೇಡದ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ ಹಾಗೂ ಹುಣಜಿಯ ಮಹಾತ್ಮಾ ಗಾಂಧೀ ಸಕ್ಕರೆ ಕಾರ್ಖಾನೆಯ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ನಾರಂಜಾ ಮತ್ತು ಕಾರಂಜಾ ನೀರಾವರಿ ಯೋಜನೆಗಳ ಅನುಷ್ಠಾನದಲ್ಲೂ ಪ್ರಮುಖ ಪಾತ್ರ ವಹಿಸಿದ್ದರು.
ಸ್ವಾತಂತ್ರ್ಯ ಸೇನಾನಿಯಾಗಿ ಹಾಗೂ ಹೈದ್ರಾಬಾದ್ ವಿಮೋಚನಾ ಹೋರಾಟಗಾರರಾಗಿ ರಜಾಕಾರರ ದೌರ್ಜನ್ಯವನ್ನು ತೀವ್ರವಾಗಿ ವಿರೋಧಿಸಿದ್ದ ಅವರು, ರಾಜ್ಯ ಏಕೀಕರಣದ ಸಂದರ್ಭದಲ್ಲಿ ಬೀದರ್ ಜಿಲ್ಲೆಯನ್ನು ಕರ್ನಾಟಕದಲ್ಲೇ ಉಳಿಸಲು ಶ್ರಮಿಸಿದ್ದರು. ಈ ಮಹತ್ವದ ಕೊಡುಗೆಗಾಗಿ ಅವರಿಗೆ ಸುವರ್ಣ ಏಕೀಕರಣ ರಾಜ್ಯ ಪ್ರಶಸ್ತಿ ನೀಡಲಾಗಿತ್ತು.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ:...