ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

Date:

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಪುಂಡಾಟಕ್ಕೆ ಮಿತಿ ಇಲ್ಲದಂತಾಗಿದೆ. ಇತ್ತೀಚೆಗೆ ಕೈದಿಗಳ ಐಷಾರಾಮಿ ಜೀವನದ ವೀಡಿಯೋಗಳು ವೈರಲ್ ಆಗಿದ್ದು, ಜೈಲಿನೊಳಗೆ ಮದ್ಯ ತಯಾರಿಸಿ ಸೇವಿಸಿದ್ದಕ್ಕೆ ಸಂಬಂಧಿಸಿದ ಸಾಕ್ಷ್ಯಗಳು ಬೆಳಕಿಗೆ ಬಂದಿದ್ದವು. ಈ ಹಿನ್ನೆಲೆಯಲ್ಲಿ ಇಬ್ಬರು ಜೈಲಾಧಿಕಾರಿಗಳನ್ನು ಅಮಾನತು ಮಾಡಲಾಗಿತ್ತು. ಹೊಸ ಡಿಜಿಪಿಯಾಗಿ ಅಲೋಕ್ ಕುಮಾರ್ ನೇಮಕಗೊಂಡ ಬಳಿಕ ಕಟ್ಟುನಿಟ್ಟಿನ ಕ್ರಮ ಜಾರಿಯಾಗಿದ್ದರೂ, ಇದೀಗ ಮತ್ತೊಂದು ಗಂಭೀರ ಘಟನೆ ಬೆಳಕಿಗೆ ಬಂದಿದೆ.

ಜನವರಿ 7ರಂದು ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಜಾಬಂಧಿಗಳಿಂದ ಸಹಾಯಕ ಜೈಲರ್ ಮೇಲೆ ಹಲ್ಲೆ ನಡೆದಿರುವುದು ತಡವಾಗಿ ಬಹಿರಂಗವಾಗಿದೆ. ಕೈದಿಗಳಾದ ಆನಂದ್ ಮತ್ತು ಅಬ್ದುಲ್ ಘನಿ ಅನವಶ್ಯಕವಾಗಿ ಸಜಾಬಂಧಿ ಕಚೇರಿಗೆ ನುಗ್ಗಲು ಯತ್ನಿಸಿದ್ದು, ಈ ವೇಳೆ ಅವರನ್ನು ತಡೆಯಲು ಮುಂದಾದ ಅಸಿಸ್ಟೆಂಟ್ ಜೈಲರ್ ಹಾಗೂ ಜೈಲು ಸಿಬ್ಬಂದಿಗೆ ಕಾಲಿನಿಂದ ಒದ್ದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಘಟನೆ ಬಳಿಕ ಜೈಲಿನಲ್ಲಿ ಕರ್ತವ್ಯ ನಿರ್ವಹಣೆಗೆ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಪ್ರಭಾರ ಅಧೀಕ್ಷಕರು ತಡವಾಗಿ ನಿನ್ನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Share post:

Subscribe

spot_imgspot_img

Popular

More like this
Related

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ...

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್, ಫೈನಲ್ ಗೆಲುವಿಗೆ ಕುತೂಹಲ

ಬಿಗ್ ಬಾಸ್ ಕನ್ನಡ ಸೀಸನ್ 12: ಗಿಲ್ಲಿ–ಅಶ್ವಿನಿ ಮಧ್ಯೆ ಟೈಟ್ ಫೈಟ್,...

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...