ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ!
ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ಅವರಿಗೆ ಸಂಬಂಧಿಸಿದೆ ಎನ್ನಲಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಚರ್ಚೆಗೆ ಕಾರಣವಾಗಿದೆ. ವಿಡಿಯೋದಲ್ಲಿ ಮಹಿಳೆಯರೊಂದಿಗೆ ಅಸಭ್ಯ ವರ್ತನೆ ನಡೆದಿದೆ ಎನ್ನುವ ಆರೋಪಗಳು ಕೇಳಿಬರುತ್ತಿವೆ.
ವೈರಲ್ ಆಗಿರುವ ವಿಡಿಯೋ ಕುರಿತು ವಿವಿಧ ರೀತಿಯ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು, ಕಚೇರಿ ಆವರಣದಲ್ಲಿ ಅಸಭ್ಯ ವರ್ತನೆ ನಡೆಸಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಆರೋಪಗಳು ಹರಡಿವೆ. ಆದರೆ, ಈ ವಿಡಿಯೋ ನಿಜಾಸತ್ಯತೆ ಕುರಿತು ಯಾವುದೇ ಅಧಿಕೃತ ದೃಢೀಕರಣ ಇನ್ನೂ ಲಭ್ಯವಾಗಿಲ್ಲ.
ಇತ್ತೀಚೆಗೆ ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿ ರಾಮಚಂದ್ರ ರಾವ್ ಅವರ ಪುತ್ರಿ ರನ್ಯಾರಾವ್ ಜೈಲು ಸೇರಿದ ವಿಚಾರವೂ ಚರ್ಚೆಯಲ್ಲಿದೆ. ಈ ಹಿನ್ನೆಲೆಯಲ್ಲಿ ವೈರಲ್ ವಿಡಿಯೋ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಆದರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಅಧಿಕೃತ ದೂರು ಅಥವಾ FIR ದಾಖಲಾಗಿಲ್ಲ. ಪೊಲೀಸ್ ಇಲಾಖೆ ಅಥವಾ ಸರ್ಕಾರದ ಮಟ್ಟದಲ್ಲಿ ಯಾವುದೇ ಅಧಿಕೃತ ಹೇಳಿಕೆಯೂ ಹೊರಬಂದಿಲ್ಲ. ವೈರಲ್ ವಿಡಿಯೋ ಹಾಗೂ ಆರೋಪಗಳ ಕುರಿತು ಮುಂದಿನ ಬೆಳವಣಿಗೆಗಳತ್ತ ಸಾರ್ವಜನಿಕರ ಗಮನ ಹರಿದಿದೆ.






