ಶಬರಿ ಮಲೆಯಲ್ಲಿ ಚಿನ್ನ ಕಳವು ಪ್ರಕರಣ: ಹಲವು ಕಡೆ ಇಡಿ ದಾಳಿ
ಬೆಂಗಳೂರು:
ಶಬರಿ ಮಲೆಯಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಬೆಂಗಳೂರು ಸೇರಿದಂತೆ ವಿವಿಧ ರಾಜ್ಯಗಳ ಹಲವೆಡೆ ದಾಳಿ ನಡೆಸಿದೆ.
ಈ ಪ್ರಕರಣದ ತನಿಖೆಯ ಭಾಗವಾಗಿ ಬೆಂಗಳೂರಿನ ಶ್ರೀರಾಂಪುರದಲ್ಲಿರುವ ಅಯ್ಯಪ್ಪ ದೇವಸ್ಥಾನ ಹಾಗೂ ದೇವಸ್ಥಾನದ ಟ್ರಸ್ಟಿ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದೇ ವೇಳೆ, ಚಿನ್ನ ಕಳವು ಪ್ರಕರಣದಲ್ಲಿ ಆರೋಪಿಯಾಗಿರುವ ಉನ್ನಿಕೃಷ್ಣನ್ ಮನೆ ಮೇಲೂ ಪರಿಶೀಲನೆ ನಡೆದಿದೆ.
ಇದಲ್ಲದೆ, ಬಳ್ಳಾರಿಯ ಕೆಲವು ಜ್ಯುವೆಲ್ಲರ್ಸ್‌ಗಳ ಮೇಲೆ ಇಡಿ ದಾಳಿ ನಡೆಸಿದ್ದು, ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಲಾಗಿದೆ.
ಕೇರಳದ ತಿರುವನಂತಪುರಂನಲ್ಲಿಯೂ ಇಡಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಸಂಗ್ರಹಿಸಿದ್ದಾರೆ.
ಸ್ಮಾರ್ಟ್ ಕ್ರಿಯೇಷನ್ಸ್ ಕಚೇರಿ, ಗೋವರ್ದನ್ ಮನೆ, ಪೊಟ್ಟಿ ಉನ್ನಿಕೃಷ್ಣನ್ ಹಾಗೂ ತಂತ್ರಿ ಮನೆಗಳ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಶಬರಿ ಮಲೆಯಲ್ಲಿ ಚಿನ್ನ ಕಳವು ಪ್ರಕರಣ: ಹಲವು ಕಡೆ ಇಡಿ ದಾಳಿ
Date:






