ಮನೆ ಬಾಗಿಲು ಒಡೆದು ಚಿನ್ನಾಭರಣ ಕಳ್ಳತನ: 300 ಗ್ರಾಂ ಚಿನ್ನ ದೋಚಿದ ಆರೋಪಿಗಳು
ಬೆಂಗಳೂರು:
ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಚೆಪಾಳ್ಯದಲ್ಲಿ ಮನೆ ಬಾಗಿಲು ಒಡೆದು ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಮನೆಯವರು ಮನೆಯಲ್ಲಿಲ್ಲದ ವೇಳೆ ಆರೋಪಿಗಳು ಬಾಗಿಲು ಒಡೆದು ಒಳನುಗ್ಗಿ ಸುಮಾರು 248 ಗ್ರಾಂ ಬೆಲೆಬಾಳುವ ಚಿನ್ನಾಭರಣವನ್ನು ಕದ್ದಿದ್ದಾರೆ. ಆರೋಪಿಗಳು ಬೈಕ್‌ನಲ್ಲಿ ಬಂದು ಕಳ್ಳತನ ನಡೆಸಿ ಪರಾರಿಯಾಗಿದ್ದರು.
ಈ ಕೃತ್ಯವನ್ನು ಮಳವಳ್ಳಿ ತಾಲ್ಲೂಕಿನ ಅಲಗೂರು ಮೂಲದ ಸಿದ್ದು ಮತ್ತು ಶ್ರೀಕಾಂತ್ ಎಂಬವರು ನಡೆಸಿರುವುದು ತನಿಖೆಯಲ್ಲಿ ತಿಳಿದು ಬಂದಿದೆ. ಆರೋಪಿಗಳಲ್ಲಿ ಸಿದ್ದು ಮೇಲೆ ಈಗಾಗಲೇ 40ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳು ದಾಖಲಾಗಿವೆ ಎನ್ನಲಾಗಿದೆ.
ಶ್ರೀಕಾಂತ್ ಮಳವಳ್ಳಿ ಬಳಿ ಮಾರುಕಟ್ಟೆ ಪ್ರದೇಶದಲ್ಲಿ ಸಣ್ಣಪುಟ್ಟ ಕಳ್ಳತನಗಳಲ್ಲಿ ತೊಡಗಿಸಿಕೊಂಡಿದ್ದು, ನಂತರ ತನ್ನ ಸಂಬಂಧಿ ಸಿದ್ದು ಜೊತೆ ಸೇರಿ ಮನೆ ಕಳ್ಳತನದಲ್ಲಿ ಭಾಗಿಯಾಗಿದ್ದಾನೆ ಎಂಬುದು ಪೊಲೀಸ್ ತನಿಖೆಯಿಂದ ಬಹಿರಂಗವಾಗಿದೆ.
ಈ ಪ್ರಕರಣದ ತನಿಖೆಯ ವೇಳೆ ಬಂಧಿತ ಆರೋಪಿಯಿಂದ ಎರಡು ಕೇಸ್‌ಗಳಲ್ಲಿ ಒಟ್ಟು 42 ಲಕ್ಷ ರೂಪಾಯಿ ಮೌಲ್ಯದ 348 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸರು ಶ್ರೀಕಾಂತ್ ಅನ್ನು ಬಂಧಿಸಿದ್ದು, ಮತ್ತೊಬ್ಬ ಆರೋಪಿಯಾದ ಸಿದ್ದುಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಮನೆ ಬಾಗಿಲು ಒಡೆದು ಚಿನ್ನಾಭರಣ ಕಳ್ಳತನ: 300 ಗ್ರಾಂ ಚಿನ್ನ ದೋಚಿದ ಆರೋಪಿಗಳು
Date:






