ಸಿಇಟಿ, ಕ್ರೈಸ್: ಒಳಮೀಸಲು ಮುದ್ರಿತ ಜಾತಿ ಪ್ರಮಾಣಪತ್ರ ಸಲ್ಲಿಸಲು ಸೂಚನೆ

Date:

ಸಿಇಟಿ, ಕ್ರೈಸ್: ಒಳಮೀಸಲು ಮುದ್ರಿತ ಜಾತಿ ಪ್ರಮಾಣಪತ್ರ ಸಲ್ಲಿಸಲು ಸೂಚನೆ

ಬೆಂಗಳೂರು: ಸಿಇಟಿ-2026 ಹಾಗೂ ಕ್ರೈಸ್-2026 (ಕೆ.ಆರ್.ಇ.ಐ.ಎಸ್) ಪರೀಕ್ಷೆ ಗಳಿಗೆ ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿ ಅಭ್ಯರ್ಥಿಗಳು ಒಳಮೀಸಲಾತಿ ವಿವರಗಳು ಮುದ್ರಿತವಾಗಿರುವ (ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ) ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಿದ್ದರೆ ಮಾತ್ರವೇ ಆಯಾ ವರ್ಗಕ್ಕೆ ನಿಗದಿಯಾಗಿರುವ ಸೀಟು ಹಂಚಿಕೆಗೆ ಪರಿಗಣಿಸಲಾಗುವುದು. ಜೊತೆಗೆ, ಆನ್ ಲೈನ್ ಅರ್ಜಿಯಲ್ಲಿ ಒಳ ಮೀಸಲಾತಿ ಇರುವ ಆರ್.ಡಿ.ಸಂಖ್ಯೆಯನ್ನು ನಮೂದಿಸಿರಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸ್ಪಷ್ಟಪಡಿಸಿದೆ.

ಈ ಬಗ್ಗೆ ಈ ಮುಂಚೆಯೇ ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗಿತ್ತು. ಆದರೂ ಕೆಲವು ಅಭ್ಯರ್ಥಿಗಳು ಈ ಮೊದಲೇ ಪಡೆದಿದ್ದ ಒಳಮೀಸಲಾತಿ ವಿವರಗಳು ಮುದ್ರಿತವಾಗಿರದ ಜಾತಿ ಪ್ರಮಾಣ ಪತ್ರದ ಆರ್.ಡಿ.ಸಂಖ್ಯೆಯನ್ನೇ ಅರ್ಜಿಯಲ್ಲಿ ನಮೂದಿಸುತ್ತಿರುವುದು ಗಮನಕ್ಕೆ ಬಂದಿದೆ. ಆದರೆ, ಇಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹೀಗಾಗಿ, ಅಭ್ಯರ್ಥಿಗಳು ಈ ಕುರಿತು ಗಮನ ವಹಿಸಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಮಂಗಳವಾರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಚೀಲ ತುಂಬಿಸಿಕೊಳ್ಳುವ ನೀತಿ ಅಳವಡಿಸಿಕೊಂಡಿದ್ದಾರೆ..

ಚೀಲ ತುಂಬಿಸಿಕೊಳ್ಳುವ ನೀತಿ ಅಳವಡಿಸಿಕೊಂಡಿದ್ದಾರೆ..ಮುಖ್ಯಮಂತ್ರಿ ಕೃಪಾಕಟಾಕ್ಷದಲ್ಲೇ ಅಬಕಾರಿ ಸಚಿವರಭ್ರಷ್ಟಾಚಾರ: ಸಿ.ಟಿ.ರವಿ ಆರೋಪ ಬೆಂಗಳೂರು:...

ಲೇಡಿ ಫಿಟ್ನೆಸ್ ಇನ್ಫ್ಲೂಯೆನ್ಸರ್‌ಗೆ ಇನ್ಸ್ಟಾಗ್ರಾಂನಲ್ಲಿ ಕಿರುಕುಳ

ಲೇಡಿ ಫಿಟ್ನೆಸ್ ಇನ್ಫ್ಲೂಯೆನ್ಸರ್‌ಗೆ ಇನ್ಸ್ಟಾಗ್ರಾಂನಲ್ಲಿ ಕಿರುಕುಳ: ಹರಿಯಾಣದಿಂದ ಬಂದು ಬೆಂಗಳೂರಿನಲ್ಲಿ ಆರೋಪಿ...

10ನೇ ತರಗತಿ ವಿದ್ಯಾರ್ಥಿನಿ ಆದ್ಲು ತಾಯಿ! ಪ್ರಿಯಕನಿಂದ ಕೃತ್ಯ – ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ

10ನೇ ತರಗತಿ ವಿದ್ಯಾರ್ಥಿನಿ ಆದ್ಲು ತಾಯಿ! ಪ್ರಿಯಕನಿಂದ ಕೃತ್ಯ – ಬೆಚ್ಚಿಬೀಳಿಸುವ...

ಮನೆ ಬಾಗಿಲು ಒಡೆದು ಚಿನ್ನಾಭರಣ ಕಳ್ಳತನ: 300 ಗ್ರಾಂ ಚಿನ್ನ ದೋಚಿದ ಆರೋಪಿಗಳು

ಮನೆ ಬಾಗಿಲು ಒಡೆದು ಚಿನ್ನಾಭರಣ ಕಳ್ಳತನ: 300 ಗ್ರಾಂ ಚಿನ್ನ ದೋಚಿದ...