ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

Date:

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಕಾರವಾರ: ಯುವಕರನ್ನು ಉಗ್ರ ಚಟುವಟಿಕೆಗೆ ಸೆಳೆಯುವ ಹಾಗೂ ಪಾಕಿಸ್ತಾನ ಮೂಲದ ಉಗ್ರ ಸಂಘಟನೆ ಲಷ್ಕರ್-ಎ-ತೈಬಾಗೆ ಸೇರ್ಪಡೆಗೊಳಿಸುವ ಸಂಚು ರೂಪಿಸಿದ್ದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ಯುವಕನಿಗೆ ವಿಶೇಷ ಎನ್ಐಎ ನ್ಯಾಯಾಲಯ 10 ವರ್ಷಗಳ ಕಾಲ ಕಠಿಣ ಜೈಲು ಶಿಕ್ಷೆ ವಿಧಿಸಿದೆ.
ಶಿಕ್ಷೆಗೆ ಗುರಿಯಾದ ಆರೋಪಿಯನ್ನು ಸಯ್ಯದ್ ಎಂ. ಇದ್ರಿಸ್ ಎಂದು ಗುರುತಿಸಲಾಗಿದೆ. ಈತ ಯುವಕರನ್ನು ಉಗ್ರ ಚಟುವಟಿಕೆಗೆ ಪ್ರೇರೇಪಿಸುವುದರ ಜೊತೆಗೆ ಲಷ್ಕರ್-ಎ-ತೈಬಾ ಸಂಘಟನೆಗೆ ಸೇರಿಸುವ ಸಂಚಿನಲ್ಲಿ ತೊಡಗಿದ್ದಾನೆ ಎಂಬ ಆರೋಪ ಸಾಬೀತಾಗಿದೆ. ಭಾರತೀಯ ದಂಡ ಸಂಹಿತೆ ಹಾಗೂ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆಯ ಜೊತೆಗೆ ₹70,000 ದಂಡವನ್ನೂ ವಿಧಿಸಿದೆ.
ಈ ಪ್ರಕರಣವು 2020ರ ಏಪ್ರಿಲ್ನಲ್ಲಿ ಪಶ್ಚಿಮ ಬಂಗಾಳ ಪೊಲೀಸರಿಂದ ದಾಖಲಾಗಿದ್ದು, ನಂತರ ಹೆಚ್ಚಿನ ತನಿಖೆಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ಹಸ್ತಾಂತರಿಸಲಾಗಿತ್ತು. ತನಿಖೆ ವೇಳೆ ಎನ್ಐಎ ಶಿರಸಿಯಲ್ಲಿ ಸಯ್ಯದ್ ಇದ್ರಿಸ್ ಮತ್ತು ಜಮ್ಮು–ಕಾಶ್ಮೀರ ನಿವಾಸಿ ಅಲ್ತಾಫ್ ಅಹ್ಮದ್ ರಾಥರ್ ಅವರನ್ನು ಬಂಧಿಸಿತ್ತು.
ಆರೋಪಿಗಳು ತಾನಿಯಾ ಪರ್ವೀನ್ ಎಂಬ ಮಹಿಳೆಯೊಂದಿಗೆ ಸೇರಿಕೊಂಡು ಪಶ್ಚಿಮ ಬಂಗಾಳದಲ್ಲಿ ಲಷ್ಕರ್-ಎ-ತೈಬಾ ಸಂಘಟನೆಯ ಘಟಕ ಸ್ಥಾಪಿಸಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ಇದಕ್ಕೂ ಮೊದಲು ಪಶ್ಚಿಮ ಬಂಗಾಳದ ಉತ್ತರ ಪರಗಣ ಜಿಲ್ಲೆಯ ಬದೂರಿಯಾ ಪ್ರದೇಶದಲ್ಲಿ ನಡೆದ ಶೋಧ ಕಾರ್ಯಾಚರಣೆಯಲ್ಲಿ ತಾನಿಯಾ ಪರ್ವೀನ್ ಅವರನ್ನು ಪೊಲೀಸರು ಬಂಧಿಸಿದ್ದರು. ಶೋಧದ ವೇಳೆ ಕಾನೂನುಬಾಹಿರ ಸಾಹಿತ್ಯ ಸೇರಿದಂತೆ ಹಲವು ಅಕ್ರಮ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು.

Share post:

Subscribe

spot_imgspot_img

Popular

More like this
Related

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಬೆಂಗಳೂರು:...

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಕಳೆದ ವಾರದ ಕನ್ನಡ ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ...

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ ದೇವನಹಳ್ಳಿಬೆಂಗಳೂರು: ಕೆಂಪೇಗೌಡ...

ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಸೋಷಿಯಲ್ ಮೀಡಿಯಾ ಅಕೌಂಟ್‌ಗಳು: ಸೈಬರ್ ಕ್ರೈಂ ತನಿಖೆ

ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಸೋಷಿಯಲ್ ಮೀಡಿಯಾ ಅಕೌಂಟ್‌ಗಳು: ಸೈಬರ್...