77ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ ನಮನ

Date:

77ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ ನಮನ

ನವದೆಹಲಿ: 77ನೇ ಗಣರಾಜ್ಯೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ, ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು.

ಪ್ರಧಾನಿ ಮೋದಿ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ವಾಗತಿಸಿದರು. ಬಳಿಕ ಪ್ರಧಾನಿ ಎರಡು ನಿಮಿಷ ಮೌನಾಚರಣೆ ನಡೆಸಿ, ಪುಷ್ಪಗುಚ್ಛ ಅರ್ಪಿಸುವ ಮೂಲಕ ವೀರಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ನಂತರ ಪ್ರಧಾನಿ ಮೋದಿ ಹಾಗೂ ಇತರ ಗಣ್ಯರು ಗಣರಾಜ್ಯೋತ್ಸವ ಪರೇಡ್ ವೀಕ್ಷಣೆಗೆ ಕರ್ತವ್ಯ ಪಥದಲ್ಲಿನ ವೇದಿಕೆಗೆ ತೆರಳಿದರು.

ಕರ್ತವ್ಯ ಪಥದಲ್ಲಿ ಪರೇಡ್‌ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಹಾಗೂ ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಉಪಸ್ಥಿತರಿದ್ದರು. ಮೂರು ರಕ್ಷಣಾ ಪಡೆಗಳ ಮುಖ್ಯಸ್ಥರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಗಣ್ಯರ ಸ್ವಾಗತದ ಬಳಿಕ ಪ್ರಧಾನಿಗಳು ಅತಿಥಿಗಳೊಂದಿಗೆ ಮುಖ್ಯ ವೇದಿಕೆಗೆ ತೆರಳಿದರು. ರಾಷ್ಟ್ರಗೀತೆ ನುಡಿಸಿದ ನಂತರ ಗಣರಾಜ್ಯೋತ್ಸವ ಪರೇಡ್‌ಗೆ ಅಧಿಕೃತ ಚಾಲನೆ ದೊರಕಿತು.

ಸಂಪ್ರದಾಯದಂತೆ, ಪ್ರಧಾನಿಗಳು ಹಾಗೂ ಇತರ ಗಣ್ಯರ ಸಮ್ಮುಖದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು. ದೇಶೀಯವಾಗಿ ಅಭಿವೃದ್ಧಿಪಡಿಸಲಾದ 105 ಎಂಎಂ ಲೈಟ್ ಫೀಲ್ಡ್ ಗನ್‌ಗಳಿಂದ 21-ಗನ್ ಸೆಲ್ಯೂಟ್ ನೀಡಲಾಯಿತು. ಈ ಗೌರವ ವಂದನೆಯನ್ನು 172 ಫೀಲ್ಡ್ ರೆಜಿಮೆಂಟ್‌ನ 1721 ಸೆರಿಮೋನಿಯಲ್ ಬ್ಯಾಟರಿ ಸಲ್ಲಿಸಿತು.

ಈ ಬಾರಿ ವಂದೇ ಮಾತರಂ ಗೀತೆ 150 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ, ವಂದೇ ಮಾತರಂ ಥೀಮ್‌ನಡಿ ಗಣರಾಜ್ಯೋತ್ಸವ ಕಾರ್ಯಕ್ರಮಗಳು ಆಯೋಜಿಸಲಾಗಿವೆ. ಪರೇಡ್‌ನಲ್ಲಿ ಆಪರೇಷನ್ ಸಿಂಧೂರ ಮಿಷನ್, ದೇಶದ ಅಭೂತಪೂರ್ವ ಅಭಿವೃದ್ಧಿ, ಬಲಿಷ್ಠ ಸೈನಿಕ ಶಕ್ತಿ ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಪರಂಪರೆ ಪ್ರದರ್ಶನಗೊಳ್ಳಲಿದೆ.

Share post:

Subscribe

spot_imgspot_img

Popular

More like this
Related

ಬಿಜೆಪಿ ರಾಷ್ಟ್ರ ಮುನ್ನಡೆಸಲು ಅಸಮರ್ಥ; ಮನರೇಗಾ ನಾಶಕ್ಕೆ ಹೊರಟಿದ್ದಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ

ಬಿಜೆಪಿ ರಾಷ್ಟ್ರ ಮುನ್ನಡೆಸಲು ಅಸಮರ್ಥ; ಮನರೇಗಾ ನಾಶಕ್ಕೆ ಹೊರಟಿದ್ದಾರೆ: ಸಚಿವೆ ಲಕ್ಷ್ಮೀ...

77ನೇ ಗಣರಾಜ್ಯೋತ್ಸವ ಸಂಭ್ರಮ; ಮಾಣೆಕ್ ಷಾ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ

77ನೇ ಗಣರಾಜ್ಯೋತ್ಸವ ಸಂಭ್ರಮ; ಮಾಣೆಕ್ ಷಾ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ ಬೆಂಗಳೂರು: ರಾಜ್ಯ...

ಅಪ್ರಾಪ್ತೆಗೆ ಸಾಮೂಹಿಕ ಅತ್ಯಾಚಾರ: ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಅಪ್ರಾಪ್ತೆಗೆ ಸಾಮೂಹಿಕ ಅತ್ಯಾಚಾರ: ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ...

ಗುಡ್‌ ನ್ಯೂಸ್ ಹಂಚಿಕೊಂಡ ಡಾಲಿ ಧನಂಜಯ್‌..! ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ

ಗುಡ್‌ ನ್ಯೂಸ್ ಹಂಚಿಕೊಂಡ ಡಾಲಿ ಧನಂಜಯ್‌..! ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ ಮೈಸೂರಿನ...