ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರು ದುರ್ಮರಣ

Date:

ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರು ದುರ್ಮರಣ

ಮುಂಬೈ: ಎನ್‌ಸಿಪಿ ಮುಖ್ಯಸ್ಥ ಹಾಗೂ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಇಂದು ಬೆಳಿಗ್ಗೆ ಮುಂಬೈನಿಂದ ಬಾರಾಮತಿಗೆ ಹೊರಟಿದ್ದ ವಿಮಾನ ಪತನಗೊಂಡ ಪರಿಣಾಮ ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ ಪೈಲಟ್‌ಗಳು ಹಾಗೂ ಪವಾರ್ ಅವರ ಭದ್ರತಾ ಸಿಬ್ಬಂದಿ ಸೇರಿದಂತೆ ಇತರ ನಾಲ್ವರು ಕೂಡ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಪ್ರಾಥಮಿಕ ವರದಿಗಳ ಪ್ರಕಾರ ತುರ್ತು ಭೂಸ್ಪರ್ಶ ಆಗುವ ಸಂದರ್ಭದಲ್ಲಿ ವಿಮಾನ ಪತನವಾಗಿದೆ. ಅಜಿತ್​ ಪವಾರ್​ ಸೇರಿದಂತೆ ಎಲ್ಲಾ ಆರು ಮಂದಿ ಪ್ರಯಾಣಿಕರು ಈ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಮೂಲಗಳು ದೃಢಪಡಿಸಿವೆ.

ಅಜಿತ್ ಪವಾರ್ ಅವರು ಬಾರಾಮತಿಯಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ವಿಮಾನವು ತಾಂತ್ರಿಕ ದೋಷದಿಂದ ಅಥವಾ ಇಳಿಯುವಾಗ ಉಂಟಾದ ಅಡಚಣೆಯಿಂದ ಪತನಗೊಂಡಿರಬಹುದು ಎಂದು ಶಂಕಿಸಲಾಗಿದೆ. ಮಹಾರಾಷ್ಟ್ರದ ರಾಜಕೀಯ ವಲಯದಲ್ಲಿ ಈ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ಅಜಿತ್ ಪವಾರ್ ಅವರು ಮಹಾರಾಷ್ಟ್ರದ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದರು ಮತ್ತು ಸುದೀರ್ಘ ಕಾಲ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಾಖಲೆ ಹೊಂದಿದ್ದರು.

Share post:

Subscribe

spot_imgspot_img

Popular

More like this
Related

LPG ಬಿಕ್ಕಟ್ಟು ತೀವ್ರ: ಗ್ಯಾಸ್ ಕೊರತೆಯಿಂದ ಆಟೋ ಚಾಲಕರ ಪರದಾಟ

LPG ಬಿಕ್ಕಟ್ಟು ತೀವ್ರ: ಗ್ಯಾಸ್ ಕೊರತೆಯಿಂದ ಆಟೋ ಚಾಲಕರ ಪರದಾಟ ಹುಬ್ಬಳ್ಳಿ: ಮಧ್ಯಪ್ರಾಚ್ಯದಲ್ಲಿ...

ಭೀಕರ ಅಪಘಾತ: KSRTC ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು!

ಭೀಕರ ಅಪಘಾತ: KSRTC ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು! ದೊಡ್ಡಬಳ್ಳಾಪುರ:...

ಬಾಯಿಯ ದುರ್ವಾಸನೆ ಕಾಡುತ್ತಿದೆಯೇ? ಈ ಸುಲಭ ಸಲಹೆಗಳು ನಿಮಗಾಗಿ!

ಬಾಯಿಯ ದುರ್ವಾಸನೆ ಕಾಡುತ್ತಿದೆಯೇ? ಈ ಸುಲಭ ಸಲಹೆಗಳು ನಿಮಗಾಗಿ! ಪ್ರತಿಯೊಬ್ಬರೂ ಬಾಯಿ ಶುಚಿತ್ವದ...

ಸೈಬರ್ ಅಪರಾಧ ನಿಯಂತ್ರಣಕ್ಕೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

ಸೈಬರ್ ಅಪರಾಧ ನಿಯಂತ್ರಣಕ್ಕೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ಬೆಂಗಳೂರು: ಸೈಬರ್ ಅಪರಾಧಗಳನ್ನು...