ಸಿಎಂ ಭೇಟಿಯಾಗಿ ರಾಜೀನಾಮೆ ನೀಡಲು ಮುಂದಾಗಿದ್ದೇಕೆ ಸಚಿವ ಜಾರ್ಜ್?

Date:

ಸಿಎಂ ಭೇಟಿಯಾಗಿ ರಾಜೀನಾಮೆ ನೀಡಲು ಮುಂದಾಗಿದ್ದೇಕೆ ಸಚಿವ ಜಾರ್ಜ್?

ಬೆಂಗಳೂರು: ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ರಾಜೀನಾಮೆಗೆ ಮುಂದಾಗಿದ್ದ ವಿಷಯ ಇದೀಗ ಬೆಳಕಿಗೆ ಬಂದಿದೆ. ವಾರದ ಹಿಂದೆ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಜಾರ್ಜ್, ಹಿರಿಯ ಐಎಎಸ್ ಅಧಿಕಾರಿ ಪಂಕಜ್ ಕುಮಾರ್ ಪಾಂಡೆ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸೂಚಿಸಿದ್ದುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು ಎಂದು ತಿಳಿದುಬಂದಿದೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಪಂಕಜ್ ಕುಮಾರ್ ಪಾಂಡೆ ವಿರುದ್ಧ ಕ್ರಮ ಜರುಗಿದರೆ, ತಾನೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಜಾರ್ಜ್ ಹೇಳಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರ್ಜ್ ಅವರನ್ನು ಸಮಾಧಾನಪಡಿಸಿ ಹಿಂದಿರುಗಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೆಪಿಟಿಸಿಎಲ್ ಎಂಡಿ ಹಾಗೂ ಕರ್ನಾಟಕ ಸರ್ಕಾರದ ಪ್ರಧಾನ ಕಾರ್ಯದರ್ಶಿ (ಇ-ಆಡಳಿತ) ಹುದ್ದೆಯನ್ನೂ ವಹಿಸಿಕೊಂಡಿರುವ ಪಂಕಜ್ ಕುಮಾರ್ ಪಾಂಡೆ ವಿರುದ್ಧ ಹಲವು ದೂರುಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ಪಡೆಯಲು ಮುಖ್ಯಮಂತ್ರಿ ಕಚೇರಿಯಿಂದ ಅವರನ್ನು ಭೇಟಿಗೆ ಆಹ್ವಾನಿಸಲಾಗಿತ್ತು. ಆದರೆ ಅಧಿಕೃತ ಮಾಹಿತಿ ತಲುಪಿದ್ದರೂ ಸಹ ಪಾಂಡೆ ಅವರು ಸಿಎಂ ಅವರನ್ನು ಭೇಟಿಯಾಗದೇ ನಿರ್ಲಕ್ಷ್ಯ ತೋರಿದ್ದರು ಎನ್ನಲಾಗಿದೆ.

ಈ ನಡೆ ಮುಖ್ಯಮಂತ್ರಿ ಕಚೇರಿಯಲ್ಲಿ ಗಂಭೀರವಾಗಿ ಪರಿಗಣಿಸಲ್ಪಟ್ಟು, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಂದ ಪಂಕಜ್ ಕುಮಾರ್ ಪಾಂಡೆ ಅವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿತ್ತು. ‘ನೋಟಿಸ್ ನೀಡಿದ ದಿನವೇ ಲಿಖಿತ ವಿವರಣೆ ಸಲ್ಲಿಸಬೇಕು’ ಎಂಬ ಕಟ್ಟುನಿಟ್ಟಿನ ಸೂಚನೆಯನ್ನೂ ನೀಡಲಾಗಿತ್ತು. ಈ ಕ್ರಮದಿಂದ ಇಂಧನ ಸಚಿವ ಕೆ.ಜೆ. ಜಾರ್ಜ್ ಅಸಮಾಧಾನಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Share post:

Subscribe

spot_imgspot_img

Popular

More like this
Related

ನಾವು ಸುಧಾರಣಾ ಎಕ್ಸ್‌ಪ್ರೆಸ್‌ ನಲ್ಲಿ ಸಾಗುತ್ತಿದ್ದೇವೆ’: ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ಹೇಳಿಕೆ

ನಾವು ಸುಧಾರಣಾ ಎಕ್ಸ್‌ಪ್ರೆಸ್‌ ನಲ್ಲಿ ಸಾಗುತ್ತಿದ್ದೇವೆ’: ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ...

ಪದೇ ಪದೇ ಸಿಹಿ ತಿನ್ನಬೇಕು ಎಂದು ಅನಿಸುವುದಕ್ಕೆ ಕಾರಣವಿದೆ! ಈ ಕಾರಣಗಳು ತಿಳಿಯಲೇಬೇಕು

ಪದೇ ಪದೇ ಸಿಹಿ ತಿನ್ನಬೇಕು ಎಂದು ಅನಿಸುವುದಕ್ಕೆ ಕಾರಣವಿದೆ! ಈ ಕಾರಣಗಳು...

ಸಕಲ ಸರ್ಕಾರಿ ಗೌರವದೊಂದಿಗೆ ಅಜಿತ್ ಪವಾರ್ ಅಂತ್ಯಕ್ರಿಯೆ; ಪ್ರಧಾನಿ, ಅಮಿತ್ ಶಾ ಭಾಗಿ

ಸಕಲ ಸರ್ಕಾರಿ ಗೌರವದೊಂದಿಗೆ ಅಜಿತ್ ಪವಾರ್ ಅಂತ್ಯಕ್ರಿಯೆ; ಪ್ರಧಾನಿ, ಅಮಿತ್ ಶಾ...

ಮುಡಾ ಹಗರಣ ಕೇಸ್: ಸಿಎಂ ಸಿದ್ದರಾಮಯ್ಯ ಬಿಗ್ ರಿಲೀಫ್ ನೀಡಿದ ಕೋರ್ಟ್​​!

ಮುಡಾ ಹಗರಣ ಕೇಸ್: ಸಿಎಂ ಸಿದ್ದರಾಮಯ್ಯ ಬಿಗ್ ರಿಲೀಫ್ ನೀಡಿದ ಕೋರ್ಟ್​​! ಬೆಂಗಳೂರು/ಮೈಸೂರು:...