ಮಾರ್ಚ್‌ನಲ್ಲಿ ಕಾಂಗ್ರೆಸ್‌ನ 100 ಕಚೇರಿಗಳಿಗೆ ಶಂಕುಸ್ಥಾಪನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

Date:

ಮಾರ್ಚ್‌ನಲ್ಲಿ ಕಾಂಗ್ರೆಸ್‌ನ 100 ಕಚೇರಿಗಳಿಗೆ ಶಂಕುಸ್ಥಾಪನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಮಂಗಳೂರು: ಮಾರ್ಚ್ ತಿಂಗಳಲ್ಲಿ ಕಾಂಗ್ರೆಸ್ ಪಕ್ಷದ 100 ಕಚೇರಿಗಳಿಗೆ ಶಂಕುಸ್ಥಾಪನೆ ಮಾಡಲು ನಿರ್ಧರಿಸಲಾಗಿದ್ದು, ಎಐಸಿಸಿಯಿಂದ ದಿನಾಂಕ ನೀಡಿದರೂ ನೀಡದಿದ್ದರೂ ತಾವು ಸಿದ್ಧತೆ ಮಾಡಿಕೊಂಡು ಕಾರ್ಯಾರಂಭಿಸುವುದಾಗಿ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ್ದಾಗಿ ತಿಳಿಸಿದರು. “ಮಾರ್ಚ್ 10ರಂದು ನಾನು ಕೆಪಿಸಿಸಿ ಅಧ್ಯಕ್ಷನಾಗಿ ಆರು ವರ್ಷಗಳನ್ನು ಪೂರ್ಣಗೊಳಿಸುತ್ತಿದ್ದೇನೆ. ಈ ಹಿನ್ನೆಲೆ ಕಾಂಗ್ರೆಸ್ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗುತ್ತಿದೆ” ಎಂದು ಹೇಳಿದರು.

ಶಿಲಾನ್ಯಾಸ ಕಾರ್ಯಕ್ರಮಕ್ಕೆ ಮುಸಲ್ಮಾನರನ್ನು ಆಹ್ವಾನಿಸಿಲ್ಲ ಎಂಬ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಶಿವಕುಮಾರ್, “ಕಾಂಗ್ರೆಸ್ ಪಕ್ಷ ಜಾತಿ ಆಧಾರಿತ ರಾಜಕಾರಣ ಮಾಡುವುದಿಲ್ಲ, ನೀತಿ ಆಧಾರಿತ ರಾಜಕಾರಣ ಮಾಡುತ್ತದೆ. ಎಲ್ಲ ಜಾತಿ, ಧರ್ಮದವರೂ ನಮಗೆ ಬೇಕು. ರಾಜಕೀಯದಲ್ಲಿ ಧರ್ಮ ಇರಬೇಕು, ಆದರೆ ಧರ್ಮದಲ್ಲಿ ರಾಜಕಾರಣ ಇರಬಾರದು. ಇದು ನಮ್ಮ ಪಕ್ಷದ ಮೂಲ ಸಿದ್ಧಾಂತ” ಎಂದು ಸ್ಪಷ್ಟಪಡಿಸಿದರು. ಈ ರೀತಿಯ ಆರೋಪಗಳು ಅಸೂಯೆಯಿಂದ ಹುಟ್ಟಿರುವುದಾಗಿ ಅವರು ಹೇಳಿದರು.

ಮುಂದಿನ ಐದು ವರ್ಷಗಳಿಗೆ ತಾವೇ ಮುಖ್ಯಮಂತ್ರಿ ಎಂದು ಹೈಕಮಾಂಡ್ ಹಸಿರು ನಿಶಾನೆ ತೋರಿದೆ ಎಂಬ ಯತೀಂದ್ರ ಅವರ ಹೇಳಿಕೆ ಕುರಿತು ಪ್ರಶ್ನಿಸಿದಾಗ, “ಅವರೇ ನಮ್ಮ ಹೈಕಮಾಂಡ್. ಅವರು ಏನು ಹೇಳುತ್ತಾರೋ ಅದನ್ನು ಗೌರವದಿಂದ ಸ್ವೀಕರಿಸುತ್ತೇನೆ. ಹೈಕಮಾಂಡ್ ಎಂದಾಗ ಅವರ ಮಾತಿಗೆ ಮನ್ನಣೆ ನೀಡೋಣ” ಎಂದು ಡಿ.ಕೆ. ಶಿವಕುಮಾರ್ ಪ್ರತಿಕ್ರಿಯಿಸಿದರು.

Share post:

Subscribe

spot_imgspot_img

Popular

More like this
Related

ಕೇಂದ್ರ ಬಜೆಟ್ನಲ್ಲಿ ಮೂರು ‘ಸಿ’ಗಳು: ಕಂಟಿನ್ಯೂಯಿಟಿ, ಕ್ರೆಡಿಬಿಲಿಟಿ, ಕಮಿಟ್ಮೆಂಟ್ – ಛಲವಾದಿ ನಾರಾಯಣಸ್ವಾಮಿ

ಕೇಂದ್ರ ಬಜೆಟ್ನಲ್ಲಿ ಮೂರು ‘ಸಿ’ಗಳು: ಕಂಟಿನ್ಯೂಯಿಟಿ, ಕ್ರೆಡಿಬಿಲಿಟಿ, ಕಮಿಟ್ಮೆಂಟ್ – ಛಲವಾದಿ...

ಬೆಂಗಳೂರಿನಲ್ಲಿ ವಿದೇಶಿ ರಾಯಭಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆ!

ಬೆಂಗಳೂರಿನಲ್ಲಿ ವಿದೇಶಿ ರಾಯಭಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆ! ಬೆಂಗಳೂರು: ಬೆಂಗಳೂರಿನಲ್ಲಿ ವಿದೇಶಿ ರಾಯಭಾರಿ...

ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ವೈದ್ಯಕೀಯ ಜಾಮೀನು

ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ...