ಕರಾವಳಿ–ಉತ್ತರ ಒಳನಾಡಿನಲ್ಲಿ ತೀವ್ರ ಚಳಿ ಮತ್ತು ಒಣಹವೆ ಮುಂದುವರಿಕೆ: ಹವಾಮಾನ ಇಲಾಖೆ

Date:

ಕರಾವಳಿ–ಉತ್ತರ ಒಳನಾಡಿನಲ್ಲಿ ತೀವ್ರ ಚಳಿ ಮತ್ತು ಒಣಹವೆ ಮುಂದುವರಿಕೆ: ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡು ಭಾಗಗಳಲ್ಲಿ ತೀವ್ರ ಚಳಿ ಮತ್ತು ಒಣಹವೆ ಇಂದೂ ಮುಂದುವರಿಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ಹೆಚ್ಚಿರುವುದರಿಂದ ಸಾರ್ವಜನಿಕರು ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಒಣಹವೆ ಇರಲಿದೆ.

ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕಳೆದ ಹಲವು ದಿನಗಳಿಂದ ಒಣಹವೆ ವಾತಾವರಣವಿದ್ದು, ಇಂದೂ ಅದೇ ಸ್ಥಿತಿ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.ಇಂದು ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ.

ತೀವ್ರ ಚಳಿಯಿಂದ ಆರೋಗ್ಯದಲ್ಲಿ ಏರುಪೇರು ಸಂಭವಿಸುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕರು ಬೆಚ್ಚಗಿನ ಹೊದಿಕೆ ಬಳಸಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ. ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದ ಇರಬೇಕೆಂದು ಹವಾಮಾನ ಇಲಾಖೆ ಸೂಚಿಸಿದ್ದು, ಬೆಚ್ಚಗಿನ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರಕ್ಕೆ ಒತ್ತು ನೀಡುವಂತೆ ಮನವಿ ಮಾಡಿದೆ.

Share post:

Subscribe

spot_imgspot_img

Popular

More like this
Related

ತಂತ್ರಜ್ಞಾನಕ್ಕೆ ಗುಲಾಮರಾಗಬೇಡಿ, ಸಾಮರ್ಥ್ಯ ಹೆಚ್ಚಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಕಿವಿಮಾತು

ತಂತ್ರಜ್ಞಾನಕ್ಕೆ ಗುಲಾಮರಾಗಬೇಡಿ, ಸಾಮರ್ಥ್ಯ ಹೆಚ್ಚಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಕಿವಿಮಾತು ನವದೆಹಲಿ: ವಿದ್ಯಾರ್ಥಿಗಳು...

ದಪ್ಪ ಕೂದಲಿಗಾಗಿ ಶಾಂಪೂ ಬಳಸುತ್ತಿದ್ದೀರಾ? ಈ ವಿಚಾರಗಳನ್ನು ತಪ್ಪದೇ ತಿಳಿಯಿರಿ

ದಪ್ಪ ಕೂದಲಿಗಾಗಿ ಶಾಂಪೂ ಬಳಸುತ್ತಿದ್ದೀರಾ? ಈ ವಿಚಾರಗಳನ್ನು ತಪ್ಪದೇ ತಿಳಿಯಿರಿ ದಪ್ಪ, ರೇಷ್ಮೆಯಂತೆ...

ದಾವಣಗೆರೆಯ ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ ನಿಧನ

ದಾವಣಗೆರೆಯ ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ ನಿಧನ ದಾವಣಗೆರೆ: ಕಳೆದ ಕೆಲ...