ಖ್ಯಾತ ನಟಿ ತಮನ್ನಾ ಭಾಟಿಯಾ ಇಂದಿನಿಂದ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ!

Date:

ಖ್ಯಾತ ನಟಿ ತಮನ್ನಾ ಭಾಟಿಯಾ ಇಂದಿನಿಂದ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ!

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್ಡಿಎಲ್) ತಯಾರಿಸುವ ಉತ್ಪನ್ನಗಳ ಮಾರುಕಟ್ಟೆ ಬಲವರ್ಧನೆ ಉದ್ದೇಶದಿಂದ ಖ್ಯಾತ ಹಿಂದಿ ನಟಿ ತಮನ್ನಾ ಭಾಟಿಯಾ ಅವರನ್ನು ಎರಡು ವರ್ಷಗಳ ಅವಧಿಗೆ ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಿಸಲಾಗಿದೆ. ಈ ನೇಮಕಕ್ಕೆ ಸಂಬಂಧಿಸಿದಂತೆ ಉಂಟಾಗಿದ್ದ ವಿವಾದದ ನಡುವೆಯೇ, ತಮನ್ನಾ ಭಾಟಿಯಾ ಅವರು ಇಂದು (ಫೆ.10) ಅಧಿಕೃತವಾಗಿ ಪ್ರಚಾರ ರಾಯಭಾರಿಯಾಗಿ ತಮ್ಮ ಕೆಲಸ ಆರಂಭಿಸಿದ್ದಾರೆ.
ಈ ಕುರಿತು ಮಾತನಾಡಿದ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, 2030ರ ವೇಳೆಗೆ ಕೆಎಸ್ಡಿಎಲ್ ಸಂಸ್ಥೆಯ ವಾರ್ಷಿಕ ವಹಿವಾಟನ್ನು 5,000 ಕೋಟಿ ರೂ.ಗಳಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದರು. ಯುವಜನಾಂಗವನ್ನು ತಲುಪಲು ವ್ಯಾಪಕ ಪ್ರಸಾರ ಅಭಿಯಾನ ಕೈಗೊಳ್ಳಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ 30 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿರುವ ತಾರಾ ವರ್ಚಸ್ಸಿನ ನಟಿ ತಮನ್ನಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು. ಈ ಮೂಲಕ ಉತ್ತರ ಭಾರತದಲ್ಲಿಯೂ ಮೈಸೂರು ಸ್ಯಾಂಡಲ್ ಸೋಪ್ ಸೇರಿದಂತೆ ಸಂಸ್ಥೆಯ ಉತ್ಪನ್ನಗಳಿಗೆ ಮಾರುಕಟ್ಟೆ ವಿಸ್ತರಿಸುವ ಉದ್ದೇಶವಿದೆ ಎಂದರು.
ಕೆಎಸ್ಡಿಎಲ್ಗೆ ಶತಮಾನಕ್ಕೂ ಮೀರಿದ ಭವ್ಯ ಪರಂಪರೆ ಇದೆ. ಮೈಸೂರು ಸಂಸ್ಥಾನದ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್, ದಿವಾನ್ ಸರ್ ಎಂ. ವಿಶ್ವೇಶ್ವರಯ್ಯ ಹಾಗೂ ಕೈಗಾರಿಕಾ ರಸಾಯನಶಾಸ್ತ್ರಜ್ಞ ಎಸ್.ಜಿ. ಶಾಸ್ತ್ರಿ (ಸೋಪ್ ಶಾಸ್ತ್ರಿ) ಅವರ ದೂರದೃಷ್ಟಿಯಿಂದ ಈ ಸಂಸ್ಥೆ ಅಸ್ತಿತ್ವಕ್ಕೆ ಬಂದಿದೆ ಎಂದು ಸಚಿವರು ವಿವರಿಸಿದರು. ಉತ್ತಮ ವಹಿವಾಟು ಮತ್ತು ಲಾಭದಲ್ಲಿರುವ ಸಂಸ್ಥೆ ಕಳೆದ ತಿಂಗಳು ಸಾಬೂನು, ಮಾರ್ಜಕ ಮತ್ತು ಸೌಂದರ್ಯವರ್ಧಕ ಎಂಬ ಮೂರು ವಿಭಾಗಗಳಲ್ಲೂ ಸಾರ್ವಕಾಲಿಕ ಉತ್ಪಾದನೆ ಸಾಧಿಸಿದೆ ಎಂದು ಹೇಳಿದರು.
ಪ್ರಸ್ತುತ ಸಂಸ್ಥೆ ಒಟ್ಟು 57 ಉತ್ಕೃಷ್ಟ ಉತ್ಪನ್ನಗಳನ್ನು ತಯಾರಿಸುತ್ತಿದ್ದು, ಮೈಸೂರು ಸ್ಯಾಂಡಲ್ ಸೋಪ್ನಿಂದ ಹಿಡಿದು ಕುಡಿಯುವ ನೀರಿನವರೆಗೂ ಉತ್ಪನ್ನಗಳ ವ್ಯಾಪ್ತಿ ಇದೆ. ಪ್ರಚಾರ ರಾಯಭಾರಿಯಾಗಿರುವ ತಮನ್ನಾ ಅವರು ಕೆಎಸ್ಡಿಎಲ್ ಉತ್ಪನ್ನಗಳ ಜಾಹೀರಾತು, ಕಾರ್ಯಕ್ರಮಗಳು ಮತ್ತು ಪ್ರಸಾರ ಚಟುವಟಿಕೆಗಳಲ್ಲಿ ಭಾಗವಹಿಸಲಿದ್ದಾರೆ. ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಇದೇ ತರಹದ ಖಾಸಗಿ ಕಂಪನಿಗಳ ಉತ್ಪನ್ನಗಳಿಗೆ ಅವರು ಪ್ರಚಾರ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಸೋಪು ಸೇರಿದಂತೆ ಶವರ್ ಜೆಲ್, ಟಾಲ್ಕಂ ಪೌಡರ್, ಹ್ಯಾಂಡ್ ವಾಶ್, ಅಗರಬತ್ತಿ, ಸಾಂಬ್ರಾಣಿ, ಧೂಪ, ಮಿಲೇನಿಯಂ ಸೋಪ್ ಮುಂತಾದ ಉತ್ಪನ್ನಗಳಿಗೆ ಉತ್ತಮ ಬೇಡಿಕೆ ಇದೆ. ಪ್ರಚಾರಾರ್ಥವಾಗಿ ಸಿದ್ಧಪಡಿಸಿರುವ ವಿಡಿಯೋಗಳನ್ನು ಮಂಗಳವಾರ ಬಿಡುಗಡೆ ಮಾಡಲಾಗುವುದು. ವಿಜಯಪುರ ಮತ್ತು ಡಾಬಸಪೇಟೆ ಕೈಗಾರಿಕಾ ಪ್ರದೇಶಗಳಲ್ಲಿ ಹೊಸ ಉತ್ಪಾದನಾ ಘಟಕಗಳನ್ನು ಆರಂಭಿಸುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಪ್ರಸ್ತುತ 25–30 ಕೋಟಿ ರೂ. ಇರುವ ರಫ್ತು ವಹಿವಾಟನ್ನು ಮುಂದಿನ ದಿನಗಳಲ್ಲಿ ದ್ವಿಗುಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

Share post:

Subscribe

spot_imgspot_img

Popular

More like this
Related

ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು’ – ಖರ್ಗೆ ಸೂಚನೆ ಪಾಲಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು’ – ಖರ್ಗೆ ಸೂಚನೆ ಪಾಲಿಸಬೇಕು:...

ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ

ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು...

ರಾಜ್ಯದ ಹಲವು ನಗರಗಳಲ್ಲಿ ವಾಯು ಗುಣಮಟ್ಟ ಕುಸಿತ: ಶಿವಮೊಗ್ಗದಲ್ಲಿ AQI ಕಳಪೆ ಮಟ್ಟ, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರ ಸಲಹೆ

ರಾಜ್ಯದ ಹಲವು ನಗರಗಳಲ್ಲಿ ವಾಯು ಗುಣಮಟ್ಟ ಕುಸಿತ: ಶಿವಮೊಗ್ಗದಲ್ಲಿ AQI ಕಳಪೆ...

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದೇವೇಗೌಡರು ಮತ್ತು ಕುಮಾರಣ್ಣ ಪ್ರೀತಿಸುವ ದೊಡ್ಡ ವರ್ಗ ಕ್ಷೇತ್ರದಲ್ಲಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದೇವೇಗೌಡರು ಮತ್ತು ಕುಮಾರಣ್ಣ ಪ್ರೀತಿಸುವ ದೊಡ್ಡ ವರ್ಗ ಕ್ಷೇತ್ರದಲ್ಲಿದ್ದಾರೆ:...