ಪತ್ರಿಕೋದ್ಯಮದ ತಪಸ್ವಿ ಪಿ. ರಾಮಯ್ಯ ವಿಧಿವಶ: ಗಣ್ಯರಿಂದ ಸಂತಾಪ

Date:

ಪತ್ರಿಕೋದ್ಯಮದ ತಪಸ್ವಿ ಪಿ. ರಾಮಯ್ಯ ವಿಧಿವಶ: ಗಣ್ಯರಿಂದ ಸಂತಾಪ

ಬೆಂಗಳೂರು: ಹಿರಿಯ ಪತ್ರಕರ್ತರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಪಿ. ರಾಮಯ್ಯ (93) ಅವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಕೊನೆಯುಸಿರೆಳೆದರು ಎಂದು ಅವರ ಪುತ್ರ ಡಾ. ಬಾಲಜಿ ತಿಳಿಸಿದ್ದಾರೆ.

1933ರ ಸೆಪ್ಟೆಂಬರ್ 12ರಂದು ಜನಿಸಿದ ಪಿ. ರಾಮಯ್ಯ ಅವರು ಐದು ದಶಕಗಳ ಕಾಲ ‘ದಿ ಹಿಂದೂ’ ಪತ್ರಿಕೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಪತ್ರಿಕಾ ಕ್ಷೇತ್ರದಲ್ಲಿ ಅಪಾರ ಗೌರವ ಪಡೆದಿದ್ದರು. ನಂತರ ವಿಧಾನ ಪರಿಷತ್ ಸದಸ್ಯರಾಗಿಯೂ ಸಾರ್ವಜನಿಕ ಜೀವನದಲ್ಲಿ ತಮ್ಮದೇ ಆದ ಗುರುತು ಮೂಡಿಸಿದ್ದರು.

ಅವರ ಅಗಲಿಕೆಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಆದಿಚುಂಚನಗಿರಿ ಮಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಾಧ್ಯಮ ಅಕಾಡೆಮಿ ಪ್ರಶಸ್ತಿ ಹಾಗೂ ಕೆಂಪೇಗೌಡ ಪ್ರಶಸ್ತಿಗೆ ಪಾತ್ರರಾಗಿದ್ದ ರಾಮಯ್ಯ ಅವರು ಪತ್ರಿಕಾ ಅಕಾಡೆಮಿ ಹಾಗೂ ವಿವಿಧ ಪತ್ರಕರ್ತರ ಕಲ್ಯಾಣ ಸಮಿತಿಗಳ ಸದಸ್ಯರಾಗಿದ್ದರು.

ಅವರಿಗೆ ಇಬ್ಬರು ಪುತ್ರರು, ಒಬ್ಬ ಪುತ್ರಿ, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗ ಇದ್ದಾರೆ. ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಬುಧವಾರ ಬೆಳಗ್ಗೆ 9 ಗಂಟೆಯಿಂದ ಸದಾಶಿವನಗರದ 7ನೇ ಮೇನ್, 16ನೇ ಕ್ರಾಸ್ (ಮನೆ ಸಂಖ್ಯೆ 295/12/1) ನಿವಾಸದಲ್ಲಿ ಇಡಲಾಗುವುದು ಎಂದು ಅವರ ಸೋದರಳಿಯ ಹಾಗೂ ಬಾಹ್ಯಾಕಾಶ ಮತ್ತು ರಕ್ಷಣಾ ವಿಶ್ಲೇಷಕರಾದ ಗಿರೀಶ್ ಲಿಂಗಣ್ಣ ತಿಳಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾರಿನ EMIಗಾಗಿ ದೊಡ್ಡಮ್ಮ ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳ್ಳತನ: ಯುವಕ ಬಂಧನ

ಕಾರಿನ EMIಗಾಗಿ ದೊಡ್ಡಮ್ಮ ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳ್ಳತನ: ಯುವಕ ಬಂಧನ ಬೆಂಗಳೂರು:...

ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ಸ್ನಾಯು ನೋವು: ಕಾರಣಗಳು ಮತ್ತು ತಡೆಗೆ ಸಲಹೆಗಳು

ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ಸ್ನಾಯು ನೋವು: ಕಾರಣಗಳು ಮತ್ತು ತಡೆಗೆ ಸಲಹೆಗಳು ಬೆಂಗಳೂರು:...

ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು’ – ಖರ್ಗೆ ಸೂಚನೆ ಪಾಲಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲರೂ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು’ – ಖರ್ಗೆ ಸೂಚನೆ ಪಾಲಿಸಬೇಕು:...

ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ

ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು...