ಫೆ.28ರಿಂದ ದ್ವಿತೀಯ ಪಿಯುಸಿ, ಮಾ.18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮಧು ಬಂಗಾರಪ್ಪ ಘೋಷಣೆ

Date:

ಫೆ.28ರಿಂದ ದ್ವಿತೀಯ ಪಿಯುಸಿ, ಮಾ.18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮಧು ಬಂಗಾರಪ್ಪ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಫೆಬ್ರವರಿ 28ರಿಂದ ಮಾರ್ಚ್‌ 17ರವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18ರಿಂದ ಏಪ್ರಿಲ್‌ 2ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿವೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಬೆಳಿಗ್ಗೆ 10ರಿಂದ ಮಧ್ಯಾಹ್ನ 1:15ರವರೆಗೆ ನಡೆಯಲಿವೆ ಎಂದು ಮಾಹಿತಿ ನೀಡಿದರು.

ದ್ವಿತೀಯ ಪಿಯುಸಿ ಪರೀಕ್ಷೆ–1 ವೇಳಾಪಟ್ಟಿ

ಫೆಬ್ರವರಿ 28: ಕನ್ನಡ, ಅರೇಬಿಕ್

ಮಾರ್ಚ್ 2: ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ

ಮಾರ್ಚ್ 3: ಇಂಗ್ಲಿಷ್

ಮಾರ್ಚ್ 4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ಮಾರ್ಚ್ 5: ಇತಿಹಾಸ

ಮಾರ್ಚ್ 6: ಭೌತಶಾಸ್ತ್ರ

ಮಾರ್ಚ್ 7: ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭ ಶಾಸ್ತ್ರ

ಮಾರ್ಚ್ 9: ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ

ಮಾರ್ಚ್ 10: ಅರ್ಥಶಾಸ್ತ್ರ

ಮಾರ್ಚ್ 11: ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ ವಿಜ್ಞಾನ

ಮಾರ್ಚ್ 12: ಹಿಂದಿ

ಮಾರ್ಚ್ 13: ರಾಜ್ಯಶಾಸ್ತ್ರ

ಮಾರ್ಚ್ 14: ಲೆಕ್ಕಶಾಸ್ತ್ರ, ಗಣಿತ

ಮಾರ್ಚ್ 16: ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ

ಮಾರ್ಚ್ 17: ಹಿಂದುಸ್ತಾನಿ ಸಂಗೀತ, ರೀಟೇಲ್, ಆಟೋಮೊಬೈಲ್, ಆರೋಗ್ಯ ರಕ್ಷಣೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ–1 ವೇಳಾಪಟ್ಟಿ

ಮಾರ್ಚ್ 18: ಪ್ರಥಮ ಭಾಷೆ

ಮಾರ್ಚ್ 23: ವಿಜ್ಞಾನ

ಮಾರ್ಚ್ 25: ದ್ವಿತೀಯ ಭಾಷೆ

ಮಾರ್ಚ್ 28: ಗಣಿತ

ಮಾರ್ಚ್ 30: ತೃತೀಯ ಭಾಷೆ

ಏಪ್ರಿಲ್ 2: ಸಮಾಜ ವಿಜ್ಞಾನ

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2 ವೇಳಾಪಟ್ಟಿ

ಮೇ 18: ಪ್ರಥಮ ಭಾಷೆ

ಮೇ 19: ವಿಜ್ಞಾನ

ಮೇ 20: ದ್ವಿತೀಯ ಭಾಷೆ

ಮೇ 21: ಗಣಿತ

ಮೇ 22: ತೃತೀಯ ಭಾಷೆ

ಮೇ 23: ಸಮಾಜ ವಿಜ್ಞಾನ

ಪರೀಕ್ಷೆಗಳ ಸಿದ್ಧತೆ ಪೂರ್ಣಗೊಂಡಿದ್ದು, ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆಗೆ ಹಾಜರಾಗುವಂತೆ ಸಚಿವರು ಮನವಿ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎ ಸೈಟ್ ಕಬಳಿಕೆ ಆರೋಪ: ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಸಿಎ ಸೈಟ್ ಕಬಳಿಕೆ ಆರೋಪ: ಕಾಂಗ್ರೆಸ್ ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ...

ಬೆಂಗಳೂರು ಸೇರಿದಂತೆ ಕರಾವಳಿಯ ನಗರಗಳಲ್ಲಿ ವಾಯು ಗುಣಮಟ್ಟ ಹದಗೆಟ್ಟು ಆತಂಕ

ಬೆಂಗಳೂರು ಸೇರಿದಂತೆ ಕರಾವಳಿಯ ನಗರಗಳಲ್ಲಿ ವಾಯು ಗುಣಮಟ್ಟ ಹದಗೆಟ್ಟು ಆತಂಕ ಬೆಂಗಳೂರು: ರಾಜ್ಯದಲ್ಲಿ...

ನಟಿಯ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‌ಮೇಲ್: ಸೈಬರ್ ಕ್ರೈಂ ಪೊಲೀಸರಿಗೆ ದೂರು

ನಟಿಯ ಖಾಸಗಿ ವಿಡಿಯೋ ರೆಕಾರ್ಡ್ ಮಾಡಿ ಬ್ಲ್ಯಾಕ್‌ಮೇಲ್: ಸೈಬರ್ ಕ್ರೈಂ ಪೊಲೀಸರಿಗೆ...

ಗ್ರಾಮೀಣ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ: ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

ಗ್ರಾಮೀಣ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ: ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ ಬೆಂಗಳೂರು:...