No menu items!
30.2 C
Munich
Thursday, July 16, 2026

ಶಾಲೆಗಳಲ್ಲಿ ಮೊಬೈಲ್ ಬ್ಯಾನ್ ವಿಚಾರ ಚರ್ಚೆಯಲ್ಲಿದೆ: ಡಿ.ಕೆ. ಶಿವಕುಮಾರ್

Must read

ಶಾಲೆಗಳಲ್ಲಿ ಮೊಬೈಲ್ ಬ್ಯಾನ್ ವಿಚಾರ ಚರ್ಚೆಯಲ್ಲಿದೆ: ಡಿ.ಕೆ. ಶಿವಕುಮಾರ್

ಬೆಂಗಳೂರು: “ಶಾಲೆಗಳಲ್ಲಿ ಮೊಬೈಲ್ ಬ್ಯಾನ್ ಮಾಡುವ ವಿಚಾರ ಚರ್ಚೆಯಲ್ಲಿದೆ. ಪೋಷಕರಿಂದಲೂ ಈ ಬಗ್ಗೆ ಒತ್ತಡವಿದೆ. ಅನೇಕ ದೇಶಗಳಲ್ಲೂ ಈ ಕ್ರಮ ಕೈಗೊಳ್ಳಲಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲೂ ಈ ವಿಷಯ ಚರ್ಚೆಯಾಗುತ್ತಿದೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಸೋಮವಾರ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಶಾಲೆಗಳಲ್ಲಿ ಮಕ್ಕಳ ಮೊಬೈಲ್ ಬಳಕೆಗೆ ಕಡಿವಾಣ ಹಾಕುವ ವಿಚಾರವಾಗಿ ಪ್ರತಿಕ್ರಿಯಿಸಿದರು. “ನಮ್ಮ ಕೆಲವು ಶಾಲೆಗಳಲ್ಲಿ ಈಗಾಗಲೇ ಮೊಬೈಲ್ ಬ್ಯಾನ್ ಮಾಡಲಾಗಿದೆ.

ಮೊಬೈಲ್ ಬಳಕೆಯ ದುರುಪಯೋಗ ಹೇಗೆ ನಡೆಯುತ್ತಿದೆ ಎಂಬುದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಸಮಗ್ರ ಚರ್ಚೆ ನಡೆಯುತ್ತಿದೆ,” ಎಂದರು. ಸಚಿವ H. C. Mahadevappa ಅವರು ದಲಿತ ಸಿಎಂ ವಿಚಾರ ಪ್ರಸ್ತಾಪಿಸಿರುವ ಬಗ್ಗೆ ಕೇಳಿದಾಗ, “ಅವರು ನಮ್ಮ ರಾಷ್ಟ್ರೀಯ ನಾಯಕರು. ಅವರಿಗೆ ಇಲ್ಲಿಂದಲೇ ನಮಸ್ಕಾರ,” ಎಂದು ಸಂಕ್ಷಿಪ್ತವಾಗಿ ಪ್ರತಿಕ್ರಿಯಿಸಿದರು.

- Advertisement -spot_img

More articles

- Advertisement -spot_img

Latest article