No menu items!
10.2 C
Munich
Tuesday, April 21, 2026

ರಾಜ್ಯದಲ್ಲಿ ಮಳೆ–ಬಿಸಿಲಿನ ಮಿಶ್ರ ಹವಾಮಾನ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Must read

ರಾಜ್ಯದಲ್ಲಿ ಮಳೆ–ಬಿಸಿಲಿನ ಮಿಶ್ರ ಹವಾಮಾನ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಏರಿಕೆಯಾಗಿರುವ ನಡುವೆ, ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಿರುವುದು ಕಂಡುಬಂದಿದೆ. ಇಂದೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು IMD ತಿಳಿಸಿದೆ. ಈ ಹಿನ್ನೆಲೆ ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ನಗರದಲ್ಲಿ ಮಾರ್ಚ್ ಎರಡನೇ ವಾರದ ನಂತರ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಆರೋಗ್ಯ ಇಲಾಖೆ ಕೂಡ ಎಚ್ಚರಿಕೆಯಿಂದ ಇರಲು ಸೂಚಿಸಿದೆ. ಬೆಳಿಗ್ಗೆ 11ರಿಂದ ಸಂಜೆ 4ರವರೆಗೆ ಅನಗತ್ಯವಾಗಿ ಹೊರಗೆ ಹೋಗಬಾರದು ಎಂದು ಸಲಹೆ ನೀಡಲಾಗಿದೆ.

ಹೀಟ್ ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯ ಇರುವುದರಿಂದ ವೃದ್ಧರು, ಗರ್ಭಿಣಿಯರು, ಮಕ್ಕಳು ಹಾಗೂ ಹೃದಯ ಸಂಬಂಧಿ ಕಾಯಿಲೆ ಇರುವವರು ವಿಶೇಷ ಎಚ್ಚರಿಕೆ ವಹಿಸಬೇಕು. ಹೆಚ್ಚಿನ ಪ್ರಮಾಣದಲ್ಲಿ ನೀರು, ತಂಪು ಪಾನೀಯಗಳು ಮತ್ತು ಹಣ್ಣುಗಳನ್ನು ಸೇವಿಸುವ ಮೂಲಕ ದೇಹದ ತಾಪಮಾನ ನಿಯಂತ್ರಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಒಟ್ಟಿನಲ್ಲಿ, ಈ ವರ್ಷವೂ ಬೆಂಗಳೂರು ಮಂದಿಗೆ ಕಠಿಣ ಬೇಸಿಗೆ ಎದುರಾಗುವ ಸೂಚನೆಗಳಿವೆ.

ಕರಾವಳಿ ಭಾಗದಲ್ಲಿ ಒಣಹವೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಒಳನಾಡು ಪ್ರದೇಶ

ಯಾದಗಿರಿ, ರಾಯಚೂರು, ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ.

ದಕ್ಷಿಣ ಒಳನಾಡು ಪ್ರದೇಶ

ಚಾಮರಾಜನಗರ, ಮಂಡ್ಯ, ಶಿವಮೊಗ್ಗ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಹಾಸನ, ಕೊಡಗು, ಮೈಸೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಣಹವೆಯ ವಾತಾವರಣ ಮುಂದುವರಿಯಲಿದೆ.

- Advertisement -spot_img

More articles

- Advertisement -spot_img

Latest article