No menu items!
9.6 C
Munich
Tuesday, April 21, 2026

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು

Must read

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು

ನವದೆಹಲಿ: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ. ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾಗೊಂಡ ಬಳಿಕ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸಂಜಯ್ ಕರೋಲ್ ಅವರ ಪೀಠದಿಂದ ಜಾಮೀನು ಮಂಜೂರಾಗಿದೆ. ಇದಕ್ಕೂ ಮುನ್ನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಿನಯ್ ಕುಲಕರ್ಣಿ ಶರಣಾಗಿದ್ದರು. ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಅವರ ಜಾಮೀನು ರದ್ದಾಗಿತ್ತು.

ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪದಡಿ ಜಾಮೀನು ರದ್ದುಪಡಿಸಲು Central Bureau of Investigation (ಸಿಬಿಐ) ಮನವಿ ಮಾಡಿತ್ತು. ಇದೀಗ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿ ಮಹತ್ವದ ಆದೇಶ ನೀಡಿದೆ.

2016ರ ಜೂನ್ 15ರಂದು ಧಾರವಾಡದ ಜಿಮ್‌ನಲ್ಲಿ ಯೋಗೀಶ್ ಗೌಡರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಕೈವಾಡವಿರುವ ಕುರಿತು ಯೋಗೀಶ್ ಗೌಡರ ಸಹೋದರರು ಮತ್ತು ಕುಟುಂಬ ಸದಸ್ಯರು ಅನುಮಾನ ವ್ಯಕ್ತಪಡಿಸಿದ್ದರು. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮನವಿ ಸಲ್ಲಿಸಲಾಗಿತ್ತು.

ಅಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸದೇ ಎಸ್‌ಐಟಿ ತನಿಖೆಗೆ ಒಪ್ಪಿಸಿತ್ತು. ಬಳಿಕ ಸಿಬಿಐ ತನಿಖೆ ನಡೆಸಿ ದೋಷಾರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.

- Advertisement -spot_img

More articles

- Advertisement -spot_img

Latest article