No menu items!
6.7 C
Munich
Tuesday, April 21, 2026

ಮಾನಸಿಕ ಖಿನ್ನತೆಗೆ ಒಳಗಾಗಿ ವೈದ್ಯ ಮಾತ್ರೆ ಸೇವಿಸಿ ಆತ್ಮಹತ್ಯೆ!

Must read

ಮಾನಸಿಕ ಖಿನ್ನತೆಗೆ ಒಳಗಾಗಿ ವೈದ್ಯ ಮಾತ್ರೆ ಸೇವಿಸಿ ಆತ್ಮಹತ್ಯೆ!

ಮಂಡ್ಯ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವೈದ್ಯರೊಬ್ಬರು ಹೋಟೆಲ್ ಕೊಠಡಿಯಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ಕೆ.ಆರ್.ನಗರ ಮೂಲದ ಸುಖದೇವ್ (53) ಆತ್ಮಹತ್ಯೆಗೆ ಶರಣಾದ ವೈದ್ಯರಾಗಿದ್ದಾರೆ. ಅವರು ಮೈಸೂರಿನ ಖಾಸಗಿ ಕ್ಲಿನಿಕ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಮಂಡ್ಯ ನಗರದ ಹರಿಪ್ರಿಯ ಹೋಟೆಲ್‌ನಲ್ಲಿ ಕೊಠಡಿ ಪಡೆದು ವಿಶ್ರಾಂತಿ ಪಡೆಯುತ್ತಿದ್ದ ಅವರು, ಮದ್ಯ ಸೇವಿಸಿದ ಬಳಿಕ ಸುಮಾರು 30 ಮಾತ್ರೆಗಳನ್ನು ಸೇವಿಸಿದ್ದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಪರಿಣಾಮವಾಗಿ ಅವರು ಕೊಠಡಿಯಲ್ಲೇ ಮೃತಪಟ್ಟಿದ್ದಾರೆ.

ಘಟನೆ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ವಶಕ್ಕೆ ಪಡೆದು ಮಂಡ್ಯ ವೈದ್ಯಕೀಯ ಮಹಾವಿದ್ಯಾಲಯ (ಮಿಮ್ಸ್) ಶವಾಗಾರಕ್ಕೆ ರವಾನಿಸಲಾಗಿದೆ.

ಕೌಟುಂಬಿಕ ಕಲಹದಿಂದಾಗಿ ಸುಖದೇವ್ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಈ ಸಂಬಂಧ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

- Advertisement -spot_img

More articles

- Advertisement -spot_img

Latest article