No menu items!
10.2 C
Munich
Tuesday, April 21, 2026

ಪ್ರೇಯಸಿ ಪ್ರತಿಕ್ರಿಯಿಸದ ನೋವು: ಒಮನ್‌ನಲ್ಲಿ ಮಂಗಳೂರು ಯುವಕ ಆತ್ಮಹತ್ಯೆ!

Must read

ಪ್ರೇಯಸಿ ಪ್ರತಿಕ್ರಿಯಿಸದ ನೋವು: ಒಮನ್‌ನಲ್ಲಿ ಮಂಗಳೂರು ಯುವಕ ಆತ್ಮಹತ್ಯೆ!

ಮಂಗಳೂರು: ಕಳೆದ ಒಂದು ತಿಂಗಳಿಂದ ಪ್ರೇಯಸಿ ಕರೆ ಹಾಗೂ ಸಂದೇಶಗಳಿಗೆ ಪ್ರತಿಕ್ರಿಯಿಸದಿದ್ದ ಹಿನ್ನೆಲೆಯಲ್ಲಿ ಮನನೊಂದು ಸೋಮೇಶ್ವರದ ಯುವಕನೊಬ್ಬ ಒಮನ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಪುನೀತ್ ಪೂಜಾರಿ (32) ಎಂದು ಗುರುತಿಸಲಾಗಿದೆ. ಇವರು ಕಳೆದ ಒಂದೂವರೆ ವರ್ಷಗಳಿಂದ ಒಮನ್‌ನ ಲಿಫ್ಟ್ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು. ನಾಲ್ಕು ವರ್ಷಗಳಿಂದ ಮಂಗಳೂರಿನ ಉರ್ವಾ ಪ್ರದೇಶದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದೆ.

ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದಿದ್ದ ಪುನೀತ್, ನಂತರ ಮತ್ತೆ ಒಮನ್‌ಗೆ ತೆರಳಿದ್ದರು. ಇತ್ತೀಚೆಗೆ ಪ್ರೀತಿಸುತ್ತಿದ್ದ ಯುವತಿ ಅವರ ಕರೆ ಮತ್ತು ಸಂದೇಶಗಳಿಗೆ ಪ್ರತಿಕ್ರಿಯೆ ನೀಡುತ್ತಿರಲಿಲ್ಲ ಎಂದು ಹೇಳಲಾಗಿದೆ. ಈ ವಿಷಯವನ್ನು ಸ್ನೇಹಿತರೊಂದಿಗೆ ಹಂಚಿಕೊಂಡಿದ್ದ ಪುನೀತ್, ಯುವತಿ ಪ್ರೀತಿ ನಿರಾಕರಿಸಿದ್ದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಮನನೊಂದು ಸಾಮಾಜಿಕ ಜಾಲತಾಣದಲ್ಲಿ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಘಟನೆ ಸಂಬಂಧ ಸ್ಥಳೀಯ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ.

- Advertisement -spot_img

More articles

- Advertisement -spot_img

Latest article