No menu items!
16.9 C
Munich
Monday, June 15, 2026

ವಿಕ್ಟೋರಿಯಾ ಆಸ್ಪತ್ರೆಗೆ ಹೊಸ ಹೆಸರು: ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಘೋಷಿಸಿದ ಸಿಎಂ

Must read

ವಿಕ್ಟೋರಿಯಾ ಆಸ್ಪತ್ರೆಗೆ ಹೊಸ ಹೆಸರು: ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಘೋಷಿಸಿದ ಸಿಎಂ

ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ವಿಕ್ಟೋರಿಯಾ ಆಸ್ಪತ್ರೆಯನ್ನು ಇನ್ನು ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಮರುನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2026-27ನೇ ಸಾಲಿನ ಬಜೆಟ್ ಮಂಡನೆ ವೇಳೆ ಮಾತನಾಡಿದ ಅವರು, ರಾಜ್ಯದ ಆರೋಗ್ಯ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಲು ಹಲವು ಹೊಸ ಯೋಜನೆಗಳನ್ನು ಘೋಷಿಸಿದರು.
ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಎರಡು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿರ್ಮಿಸಲಾಗುವುದು ಎಂದು ಸಿಎಂ ತಿಳಿಸಿದರು. ಇದರಿಂದ ಉತ್ತರ ಕರ್ನಾಟಕ ಸೇರಿದಂತೆ ಹಲವು ಭಾಗಗಳ ಜನರಿಗೆ ವಿಶೇಷ ಆರೋಗ್ಯ ಸೇವೆಗಳು ಲಭ್ಯವಾಗಲಿವೆ.
ಇದೇ ವೇಳೆ ಮುನಿರಾಬಾದ್–ಟಿ.ಬಿ ಡ್ಯಾಂ ಸಮೀಪ ಕ್ಯಾನ್ಸರ್ ಆಸ್ಪತ್ರೆ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಈ ಯೋಜನೆಗಳಿಂದ ರಾಜ್ಯದಲ್ಲಿ ಉತ್ತಮ ಆರೋಗ್ಯ ಸೇವೆ ಒದಗಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

- Advertisement -spot_img

More articles

- Advertisement -spot_img

Latest article