No menu items!
13.5 C
Munich
Thursday, April 23, 2026

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

Must read

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಸಮಾಜದ ಬಡವರು ಹಾಗೂ ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಪಿಲ್ಲಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಶ್ರೀ ಆದಿಶಕ್ತತ್ಮಕ ದಂಡಿಮಾರಮ್ಮ ದೇವಾಲಯದ ಪ್ರತಿಷ್ಠಾಪನೆ ಮಹೋತ್ಸವ ಹಾಗೂ ಕುಂಭಕಳಶದ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ದೇವರು ದೇಗುಲಗಳಲ್ಲಿ ಇರುತ್ತಾರೆಂಬುದು ನಮ್ಮ ನಂಬಿಕೆ. ದೇವರ ಆರಾಧನೆಯಿಂದ ಒಳಿತಾಗುತ್ತದೆ ಎಂಬ ನಂಬಿಕೆಯನ್ನು ನಾನು ವಿರೋಧಿಸುವುದಿಲ್ಲ. ಆದರೆ ದೇವರು ಎಲ್ಲೆಡೆಯೂ ಇದ್ದಾನೆ ಎಂದು ನಾನು ನಂಬುವವನು ಮತ್ತು ಆಚರಿಸುವವನು. 1978 ರಲ್ಲಿ ತಾಲ್ಲೂಕು ಅಭಿವೃದ್ಧಿ ಮಂಡಳಿಯ ಪ್ರಥಮ ಬಾರಿಗೆ ಚುನಾವಣೆಯಲ್ಲಿ ಸ್ಪರ್ದಿಸಿದಾಗ ಇಲ್ಲಿನ ಜನರ ಆಶೀರ್ವಾದ ನನಗೆ ದೊರೆತಿತ್ತು. ನಂತರ ವಿಧಾನಸಭಾ ಚುನಾವಣೆಯಲ್ಲಿ ಜನರ ಸಹಕಾರ ದೊರೆಯಿತು.

ಮೈಸೂರು ತಾಲ್ಲೂಕಿನ ಚಾಮುಂಡೇಶ್ವರಿ ಹಾಗೂ ವರುಣಾ ಕ್ಷೇತ್ರದ ಜನರ ಆಶೀರ್ವಾದದಿಂದ ಈವರೆಗೆ 8 ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದು, ರಾಜ್ಯದ ಮುಖ್ಯಮಂತ್ರಿಯಾಗಲು ಸಾಧ್ಯವಾಗಿದೆ. ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಪಿಲ್ಲಹಳ್ಳಿ ಜನರ ಪ್ರೀತಿಯಿಂದಾಗಿ ಇಲ್ಲಿನ ದೇವಸ್ಥಾನದ ಉದ್ಘಾಟನೆಗೆ ಆಗಮಿಸಿದ್ದೇನೆ. 1978 ರಿಂದ ಇಂದಿನವರೆಗೂ ಹಾಗೂ ಮುಂದೆಯೂ ಈ ಭಾಗದ ಜನರ ಸಹಕಾರ ದೊರೆಯುವ ವಿಶ್ವಾಸವಿದೆ ಎಂದರು.

- Advertisement -spot_img

More articles

- Advertisement -spot_img

Latest article