No menu items!
6.6 C
Munich
Thursday, April 23, 2026

ಇಂದು ಮೊದಲ ಬಾರಿಗೆ ಫೈನಲ್ʼನಲ್ಲಿ ಭಾರತ–ನ್ಯೂಜಿಲೆಂಡ್ ಮುಖಾಮುಖಿ!

Must read

ಇಂದು ಮೊದಲ ಬಾರಿಗೆ ಫೈನಲ್ʼನಲ್ಲಿ ಭಾರತ–ನ್ಯೂಜಿಲೆಂಡ್ ಮುಖಾಮುಖಿ!

ಅಹಮದಾಬಾದ್: 2026ರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿದ್ದು, ಈ ಹೈವೋಲ್ಟೇಜ್ ಕದನಕ್ಕಾಗಿ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಆರಂಭದಿಂದಲೇ ಪ್ರಶಸ್ತಿ ಸ್ಪರ್ಧಿಯಾಗಿ ಗುರುತಿಸಿಕೊಂಡಿರುವ ಆತಿಥೇಯ ಟೀಂ ಇಂಡಿಯಾ, ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿ ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಮತ್ತೊಂದೆಡೆ ನ್ಯೂಜಿಲೆಂಡ್ ತಂಡವು ಮೊದಲ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಏಕಪಕ್ಷೀಯವಾಗಿ ಸೋಲಿಸಿ ಫೈನಲ್ನಲ್ಲಿ ಸ್ಥಾನ ಭದ್ರಪಡಿಸಿಕೊಂಡಿದೆ.
ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ಮೊದಲ ಬಾರಿಗೆ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿರುವುದು ಈ ಕದನದ ವಿಶೇಷತೆಯಾಗಿದೆ. ಹೀಗಾಗಿ ಯಾವ ತಂಡ ಟ್ರೋಫಿ ಎತ್ತಲಿದೆ ಎಂಬುದರ ಬಗ್ಗೆ ಕುತೂಹಲ ಹೆಚ್ಚಾಗಿದೆ.
ಈ ಮಹತ್ವದ ಫೈನಲ್ ಪಂದ್ಯವು ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯ ಇಂದು ಸಂಜೆ 7 ಗಂಟೆಗೆ ಆರಂಭವಾಗಲಿದ್ದು, ಟಾಸ್ ಸಂಜೆ 6:30ಕ್ಕೆ ನಡೆಯಲಿದೆ.
ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನ ವಿವಿಧ ಚಾನೆಲ್ಗಳಲ್ಲಿ ವೀಕ್ಷಿಸಬಹುದಾಗಿದೆ. ಆನ್ಲೈನ್ ಲೈವ್ ಸ್ಟ್ರೀಮಿಂಗ್ ಜಿಯೋಹಾಟ್ಸ್ಟಾರ್ ಆಪ್ ಹಾಗೂ ವೆಬ್ಸೈಟ್ನಲ್ಲಿ ಲಭ್ಯವಿರಲಿದೆ.
ಉಭಯ ತಂಡಗಳು
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಶಿವಂ ದುಬೆ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್.
ನ್ಯೂಜಿಲೆಂಡ್ ತಂಡ: ಫಿನ್ ಅಲೆನ್, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಕೈಲ್ ಜೇಮಿಸನ್, ಇಶ್ ಸೋಧಿ, ಲಾಕಿ ಫರ್ಗುಸನ್, ಜಾಕೋಬ್ ಡಫಿ, ಜೇಮ್ಸ್ ನೀಶಮ್, ಮ್ಯಾಟ್ ಹೆನ್ರಿ, ಡೆವೊನ್ ಕಾನ್ವೇ, ಮಾರ್ಕ್ ಚಾಪ್ಮನ್.

- Advertisement -spot_img

More articles

- Advertisement -spot_img

Latest article