No menu items!
19.6 C
Munich
Friday, May 1, 2026

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ: ಮೇ 4ಕ್ಕೆ ಫಲಿತಾಂಶ

Must read

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ: ಮೇ 4ಕ್ಕೆ ಫಲಿತಾಂಶ

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿ ವಿಧಾನಸಭಾ ಚುನಾವಣೆಯ ಜೊತೆಗೆ ಕರ್ನಾಟಕದ ಎರಡು ಕ್ಷೇತ್ರಗಳ ಉಪಚುನಾವಣೆಯ ದಿನಾಂಕವನ್ನು ಭಾನುವಾರ ಪ್ರಕಟಿಸಿದೆ.
ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಯ ಜೊತೆಗೆ ಉಪಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಯಿತು.
ಪಶ್ಚಿಮ ಬಂಗಾಳನಲ್ಲಿ ಏಪ್ರಿಲ್ 23 ಮತ್ತು 29ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ತಮಿಳುನಾಡು, ಅಸ್ಸೋಂ, ಪುದುಚೆರಿ ಮತ್ತು ಕೇರಳದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಎಲ್ಲಾ ರಾಜ್ಯಗಳ ಚುನಾವಣಾ ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ ಎಂದು ಆಯೋಗ ತಿಳಿಸಿದೆ.
ತಮಿಳುನಾಡಿನಲ್ಲಿ ಏಪ್ರಿಲ್ 23ರಂದು ಮತದಾನ ನಡೆಯಲಿದ್ದು, ಅಸ್ಸಾಂ, ಕೇರಳ ಹಾಗೂ ಪುದುಚೇರಿಯಲ್ಲಿ ಏಪ್ರಿಲ್ 9ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.
ಇದೇ ವೇಳೆ ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಉಪಚುನಾವಣೆ ನಡೆಯಲಿದೆ. ದಾವಣಗೆರೆ ದಕ್ಷಿಣ ಕ್ಷೇತ್ರವು ಶಾಮನೂರು ಶಿವಶಂಕರಪ್ಪಅವರ ನಿಧನದಿಂದ ತೆರವಾಗಿದ್ದು, ಬಾಗಲಕೋಟೆ ಕ್ಷೇತ್ರವು ಹೆಚ್ ವೈ ಮೇಟಿಅವರ ಅಗಲಿಕೆಯಿಂದ ತೆರವಾಗಿದೆ.
ಈ ಎರಡೂ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಉಪಚುನಾವಣೆ ನಡೆಯಲಿದೆ ಎಂದು ಭಾರತದ ಮುಖ್ಯ ಚುನಾವಣಾಧಿಕಾರಿ ಗ್ಯಾನೇಶ್ ಕುಮಾರ್ ಭಾನುವಾರ ಘೋಷಿಸಿದ್ದಾರೆ.

- Advertisement -spot_img

More articles

- Advertisement -spot_img

Latest article