No menu items!
20.3 C
Munich
Monday, June 15, 2026

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

Must read

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಹಾಸನ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಂಬಂಧಿಸಿದ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಪೆನ್‌ಡ್ರೈವ್ ಹಂಚಿಕೆ ಕುರಿತು ವಿಶೇಷ ತನಿಖಾ ದಳ (SIT) ಮಹತ್ವದ ಹೆಜ್ಜೆ ಇಟ್ಟಿದ್ದು, ಹಾಸನ ಸಿವಿಲ್ ನ್ಯಾಯಾಲಯಕ್ಕೆ 13,712 ಪುಟಗಳ ದೋಷಾರೋಪಣ ಪಟ್ಟಿ ಸಲ್ಲಿಸಿದೆ.

ಈ ಪ್ರಕರಣದಲ್ಲಿ ಒಟ್ಟು 39 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿದ್ದು, ತನಿಖೆ ವೇಳೆ ಅಶ್ಲೀಲ ವಿಡಿಯೋ ಹಂಚಲು ಆರೋಪಿಗಳು ಸುಮಾರು 70 ಪೆನ್‌ಡ್ರೈವ್‌ಗಳನ್ನು ಖರೀದಿಸಿದ್ದರೆಂಬುದು ಬಹಿರಂಗವಾಗಿದೆ. ಈ ಪೆನ್‌ಡ್ರೈವ್‌ಗಳನ್ನು ಹಾಸನದಲ್ಲೇ ಖರೀದಿಸಿರುವುದು ತನಿಖೆಯಿಂದ ತಿಳಿದುಬಂದಿದೆ.

ಮೊದಲು ಪ್ರಕರಣದಲ್ಲಿ 52 ಮಂದಿಯ ಹೆಸರು ಉಲ್ಲೇಖವಾಗಿದ್ದರೂ, ಪರಿಶೀಲನೆಯ ಬಳಿಕ 39 ಮಂದಿಯ ವಿರುದ್ಧ ಸಾಕ್ಷ್ಯಾಧಾರಗಳು ದೃಢಪಟ್ಟ ಹಿನ್ನೆಲೆಯಲ್ಲಿ ಅವರ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ. ವಕೀಲ ಪೂರ್ಣಚಂದ್ರ ನೀಡಿದ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿತ್ತು. ತಾಂತ್ರಿಕ ವರದಿ ಹಾಗೂ ಎಫ್‌ಎಸ್‌ಎಲ್ (Forensic Science Laboratory) ವರದಿ ಆಧರಿಸಿ ಈ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.

ಇನ್ನೊಂದೆಡೆ, ಗೃಹಕಾರ್ಮಿಕೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಪ್ರಜ್ವಲ್ ರೇವಣ್ಣ ಅವರು ಡಿಎನ್‌ಎ ಮತ್ತು ಡಿಜಿಟಲ್ ಸಾಕ್ಷ್ಯಗಳ ದಾಖಲೆಗಾಗಿ ಸಲ್ಲಿಸಿರುವ ಮಧ್ಯಂತರ ಅರ್ಜಿಗೆ ಸಂಬಂಧಿಸಿದಂತೆ, ವಿಶೇಷ ತನಿಖಾ ದಳಕ್ಕೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿತ್ತು.

ಈ ಸಂಬಂಧ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಹೆಚ್.ಪಿ. ಸಂದೇಶ್ ಮತ್ತು ಟಿ. ವೆಂಕಟೇಶ್ ನಾಯಕ್ ಅವರಿದ್ದ ವಿಭಾಗೀಯ ಪೀಠ ನಡೆಸಿದೆ. ಪ್ರಕರಣದ ಮುಂದಿನ ವಿಚಾರಣೆ ಮುಂದುವರಿಯಲಿದೆ.

- Advertisement -spot_img

More articles

- Advertisement -spot_img

Latest article