No menu items!
26.8 C
Munich
Sunday, May 24, 2026

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ

Must read

ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು, ಮಾರ್ಚ್ 19: ರಾಜ್ಯದಲ್ಲಿ ಬೇಸಿಗೆಯ ಬಿಸಿಗೆ ತತ್ತರಿಸಿದ್ದ ಜನರಿಗೆ ಕಳೆದ ಎರಡು ದಿನಗಳಿಂದ ಸುರಿದ ಮಳೆ ತಂಪಿನ ಅನುಭವ ನೀಡಿದೆ. ಆದರೆ ಇದೇ ಮಳೆ ಮುಂದಿನ ಎರಡು ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, Bengaluru ಸೇರಿದಂತೆ ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬುಧವಾರವೂ ರಾಜ್ಯದ ಹಲವೆಡೆ ಉತ್ತಮ ಮಳೆಯಾಗಿದ್ದು, ಕೆಲ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಮತ್ತು ವಾಹನ ಸವಾರರಿಗೆ ತೊಂದರೆ ಉಂಟಾಯಿತು.
ಮುಂದಿನ ದಿನಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಜಾಗ್ರತೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.

- Advertisement -spot_img

More articles

- Advertisement -spot_img

Latest article