No menu items!
16.5 C
Munich
Thursday, July 16, 2026

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

Must read

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಬೆಂಗಳೂರು: ಯುಗಾದಿ ಹಬ್ಬದ ಸಂಭ್ರಮದ ನಂತರದ ದಿನವಾದ ಇಂದು ‘ಹೊಸತೊಡಕು’ ಆಚರಣೆಯ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಾಂಸದ ಖರೀದಿ ಜೋರಾಗಿದೆ.
ಬೆಂಗಳೂರು, ದೇವನಹಳ್ಳಿ, ಮೈಸೂರು ಮತ್ತು ಮಂಡ್ಯ ಸೇರಿದಂತೆ ಹಲವು ನಗರಗಳಲ್ಲಿ ಮಾಂಸದಂಗಡಿಗಳು ಗ್ರಾಹಕರಿಂದ ಕಿಕ್ಕಿರಿದು ಕಾಣಿಸುತ್ತಿವೆ.
ಹೊಸತೊಡಕಿನ ಹಿನ್ನೆಲೆ ಮಟನ್ ದರದಲ್ಲಿ ಭಾರೀ ಏರಿಕೆ ಕಂಡುಬಂದಿದ್ದು, ಒಂದು ಕೆಜಿಗೆ ₹1000ರಿಂದ ₹1500ರವರೆಗೆ ಮಾರಾಟವಾಗುತ್ತಿದೆ. ಬೆಲೆ ಏರಿಕೆಯಾಗಿದ್ದರೂ, ಸಂಪ್ರದಾಯವನ್ನು ಪಾಲಿಸಲು ಜನರು ಉತ್ಸಾಹದಿಂದ ಖರೀದಿಯಲ್ಲಿ ತೊಡಗಿದ್ದಾರೆ.
ಬೆಂಗಳೂರು ಸೇರಿದಂತೆ ಹಲವು ಭಾಗಗಳ ಪ್ರಮುಖ ಮಾಂಸದ ಮಳಿಗೆಗಳಲ್ಲಿ ಬೆಳ್ಳಂಬೆಳಗ್ಗಿನಿಂದಲೇ ಜನರು ಸರತಿ ಸಾಲಿನಲ್ಲಿ ನಿಂತು ಮಟನ್ ಖರೀದಿಸುತ್ತಿರುವ ದೃಶ್ಯಗಳು ಕಂಡುಬಂದಿವೆ.
ಪ್ರತಿ ವರ್ಷದಂತೆ ಈ ವರ್ಷವೂ ಹೊಸತೊಡಕಿನಂದು ಮಾಂಸದ ಬೇಡಿಕೆ ಹೆಚ್ಚಿದ್ದು, ಜನರು ಹಬ್ಬದ ಸಂಭ್ರಮದಲ್ಲಿ ಖರೀದಿಯನ್ನು ಮುಂದುವರಿಸಿದ್ದಾರೆ.

- Advertisement -spot_img

More articles

- Advertisement -spot_img

Latest article