ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ. ಶಿವಕುಮಾರ್ ವಿಶ್ವಾಸ

Date:

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಡಿ.ಕೆ. ಶಿವಕುಮಾರ್ ವಿಶ್ವಾಸ

ದಾವಣಗೆರೆ: ದಿವಂಗತ ಶಾಮನೂರು ಶಿವಶಂಕರಪ್ಪ ಅವರು ಮಾಡಿದ ಸೇವೆ ಹಾಗೂ ಕೊಡುಗೆಗಳನ್ನು ಈ ಭಾಗದ ಜನರು ಇನ್ನೂ ಸ್ಮರಿಸುತ್ತಿದ್ದಾರೆ. ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ ಅವರು ಭರ್ಜರಿ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ಮಂಗಳವಾರ ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಪ್ರಚಾರದ ಕುರಿತು ಪ್ರತಿಕ್ರಿಯೆ ನೀಡಿದರು.
ಎರಡು ಕ್ಷೇತ್ರಗಳ ಉಪಚುನಾವಣೆ ಕುರಿತು ಮಾತನಾಡಿದ ಅವರು, ಮುಖ್ಯಮಂತ್ರಿ ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ಪಕ್ಷವು ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ಯಾವ ನಾಯಕನಿಗೆ ಎಲ್ಲಿ ಜವಾಬ್ದಾರಿ ನೀಡಿದೆಯೋ, ಅವರು ಅಲ್ಲಲ್ಲಿ ಪ್ರಚಾರ ನಡೆಸುತ್ತಿದ್ದಾರೆ ಎಂದು ಹೇಳಿದರು.
ತಾವು ಅಸ್ಸಾಂನಲ್ಲಿ ಎರಡು ದಿನ ಪ್ರಚಾರ ಮುಗಿಸಿ ದಾವಣಗೆರೆಗೆ ಬಂದಿರುವುದಾಗಿ ತಿಳಿಸಿದ ಅವರು, ಇಂದು ದಾವಣಗೆರೆಯಲ್ಲಿ ಮತ್ತು ನಾಳೆ ಬಾಗಲಕೋಟೆಯಲ್ಲಿ ಪ್ರಚಾರ ನಡೆಸಲಿದ್ದೇವೆ. ಬಳಿಕ ಮತ್ತೆ ಈ ಎರಡೂ ಜಿಲ್ಲೆಗಳಲ್ಲಿ ಪ್ರಚಾರ ಮುಂದುವರಿಸಲಾಗುತ್ತದೆ ಎಂದು ಹೇಳಿದರು.
ಇದರ ನಡುವೆ ಎರಡು ದಿನ ಕೇರಳ ಹಾಗೂ ಒಂದು ದಿನ ಅಸ್ಸಾಂಗೆ ತೆರಳಿ ಪ್ರಚಾರದಲ್ಲಿ ಭಾಗವಹಿಸುವುದಾಗಿ ಡಿ.ಕೆ. ಶಿವಕುಮಾರ್ ತಿಳಿಸಿದರು.

Share post:

Subscribe

spot_imgspot_img

Popular

More like this
Related

ಸರಿಯಾಗಿ ಕೆಲಸಕ್ಕೆ ಯಾಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಸೂಪರ್ ವೈಸರ್ ಹತ್ಯೆ!

ಸರಿಯಾಗಿ ಕೆಲಸಕ್ಕೆ ಯಾಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಸೂಪರ್ ವೈಸರ್ ಹತ್ಯೆ! ಬೆಂಗಳೂರು:...

ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ ಬಂಧನ

ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ...

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು..? 

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು..?  ಇಂದಿನ ವೇಗದ...

ಮೈಸೂರು: ದಾಸವಾಳದ ದಿಂಡು ನುಂಗಿ 6 ತಿಂಗಳ ಮಗು ದುರ್ಮರಣ!

ಮೈಸೂರು: ದಾಸವಾಳದ ದಿಂಡು ನುಂಗಿ 6 ತಿಂಗಳ ಮಗು ದುರ್ಮರಣ! ಮೈಸೂರು: ದಾಸವಾಳ...