No menu items!
8.7 C
Munich
Tuesday, June 16, 2026

ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆಗೆ ಮುಹೂರ್ತ ಫಿಕ್ಸ್! ಈ ರೀತಿ ಚೆಕ್ ಮಾಡಿ

Must read

ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆಗೆ ಮುಹೂರ್ತ ಫಿಕ್ಸ್! ಈ ರೀತಿ ಚೆಕ್ ಮಾಡಿ

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಏಪ್ರಿಲ್ 7ರಂದು ಪ್ರಕಟವಾಗುವ ಸಾಧ್ಯತೆ ಇದೆ. ಆದರೆ ಈ ಕುರಿತು ಇನ್ನೂ ಅಧಿಕೃತ ಘೋಷಣೆ ಹೊರಬಿದ್ದಿಲ್ಲ.
ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆದ ಪರೀಕ್ಷೆಗಳ ಮೌಲ್ಯಮಾಪನ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದ್ದು, ಫಲಿತಾಂಶ ಪ್ರಕಟಣೆಗೆ ಎಲ್ಲಾ ಸಿದ್ಧತೆಗಳು ಮುಗಿದಿವೆ. ಈ ಕುರಿತು ಶಿಕ್ಷಣ ಇಲಾಖೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಮಾಹಿತಿ ನೀಡಿದೆ. ಸಚಿವರ ಲಭ್ಯತೆಯನ್ನು ಆಧರಿಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಾಗುತ್ತದೆ.
ತಾಂತ್ರಿಕ ಕಾರ್ಯಗಳು ಹಾಗೂ ಅಂಕಗಳ ಕ್ರೋಡೀಕರಣ ಪ್ರಕ್ರಿಯೆಯೂ ಪೂರ್ಣಗೊಂಡಿದ್ದು, ನಿಗದಿತ ದಿನಾಂಕದಲ್ಲೇ ಫಲಿತಾಂಶ ಹೊರಬರುವ ನಿರೀಕ್ಷೆ ಇದೆ.
ಫಲಿತಾಂಶ ಪ್ರಕಟವಾದ ಬಳಿಕ ವಿದ್ಯಾರ್ಥಿಗಳು karresults.nic.in ಮತ್ತು kseab.karnataka.gov.in ವೆಬ್ಸೈಟ್ಗಳಲ್ಲಿ ಪರಿಶೀಲಿಸಬಹುದು. ಈ ವೆಬ್ಸೈಟ್ಗಳಲ್ಲಿ ತೊಂದರೆ ಉಂಟಾದರೆ, ಡಿಜಿಲಾಕರ್ ವೇದಿಕೆಯಾದ digilocker.gov.in ಮೂಲಕವೂ ಫಲಿತಾಂಶ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

- Advertisement -spot_img

More articles

- Advertisement -spot_img

Latest article