No menu items!
26.8 C
Munich
Saturday, May 23, 2026

ಮೈಸೂರು ರಸ್ತೆ ಬಳಿ ಭೀಕರ ಲಾರಿ ಅಪಘಾತ: ಚಾಲಕ ಸ್ಥಳದಲ್ಲೇ ಸಾವು

Must read

ಮೈಸೂರು ರಸ್ತೆ ಬಳಿ ಭೀಕರ ಲಾರಿ ಅಪಘಾತ: ಚಾಲಕ ಸ್ಥಳದಲ್ಲೇ ಸಾವು

ಬೆಂಗಳೂರು: ನಗರದ ಮೈಸೂರು ರಸ್ತೆ ಸಾಟಲೈಟ್ ಬಸ್ ನಿಲ್ದಾಣದ ಸಿಗ್ನಲ್ ಬಳಿ ಬುಧವಾರ ಮುಂಜಾನೆ ಭೀಕರ ಲಾರಿ ಅಪಘಾತ ಸಂಭವಿಸಿ, ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೃತ ಚಾಲಕನನ್ನು ವಿಜಯ್ ಎಂದು ಗುರುತಿಸಲಾಗಿದ್ದು, ಈಚರ್ ಲಾರಿಯನ್ನು ಚಲಾಯಿಸುತ್ತಿದ್ದನು. ಕೆ.ಆರ್. ಮಾರ್ಕೆಟ್‌ನಿಂದ ಮೈಸೂರು ರಸ್ತೆಯತ್ತ ವೇಗವಾಗಿ ಬರುತ್ತಿದ್ದ ಲಾರಿ, ಫ್ಲೈಓವರ್ ಮೇಲೆಯೇ ಹಲವು ಬಾರಿ ನಿಯಂತ್ರಣ ತಪ್ಪಿ ಸರಣಿ ಅಪಘಾತಗಳನ್ನು ಎಸಗಿದ ಬಳಿಕ, ಸಿಗ್ನಲ್‌ನಲ್ಲಿ ನಿಂತಿದ್ದ ಮತ್ತೊಂದು ಲಾರಿಗೆ ಹಿಂಬದಿಯಿಂದ ಭಾರೀ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ತೀವ್ರತೆಗೆ ಈಚರ್ ಲಾರಿಯ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಚಾಲಕ ವಿಜಯ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

ಅಪಘಾತಕ್ಕೀಡಾದ ಲಾರಿಗಳಲ್ಲಿ ಒಂದು ತರಕಾರಿ ಸಾಗಿಸುತ್ತಿದ್ದುದಾಗಿ ತಿಳಿದುಬಂದಿದೆ. ಘಟನೆಯ ಪರಿಣಾಮವಾಗಿ ಕೆಲವು ಸಮಯ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತು.

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಪುನಃ ಸುವ್ಯವಸ್ಥಿತಗೊಳಿಸಲು ಕ್ರಮ ಕೈಗೊಂಡಿದ್ದಾರೆ. ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ.

- Advertisement -spot_img

More articles

- Advertisement -spot_img

Latest article