Karnataka 2nd PUC Results: 600ಕ್ಕೆ 600 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದಿಶಾ ಮೂಡುಬಿದರೆ!

tnit editors
1 Min Read

Karnataka 2nd PUC Results: 600ಕ್ಕೆ 600 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದಿಶಾ ಮೂಡುಬಿದರೆ!

ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಒಟ್ಟು 7,10,363 ವಿದ್ಯಾರ್ಥಿಗಳಲ್ಲಿ ಸುಮಾರು 6.10 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಬಾರಿ ಫಲಿತಾಂಶದಲ್ಲಿ ದಾಖಲೆ ಮಟ್ಟದ ಏರಿಕೆ ಕಂಡುಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಉಡುಪಿ ಜಿಲ್ಲೆಯ ಕಾರ್ಕಳದ ಜ್ಞಾನಸುಧಾ ಪಿಯು ಕಾಲೇಜಿನ ವಿದ್ಯಾರ್ಥಿನಿ ವೈಷ್ಣವಿ 600ಕ್ಕೆ 597 ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ. ಅದೇ ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿನಿ ಆರ್ನವಿ ಕೂಡ 600ಕ್ಕೆ 597 ಅಂಕಗಳನ್ನು ಗಳಿಸಿ ಗಮನ ಸೆಳೆದಿದ್ದಾರೆ.

ಹೀಗೆ ನೋಡಿ ರಿಸಲ್ಟ್:

https://karresults.nic.in ಲಿಂಕ್​ ಮೂಲಕ ಹಾಗೂ KarnatakaOne Mobile App ಮೂಲಕವೂ ರಿಸಲ್ಟ್​ ನೋಡಬಹುದು. ಅಲ್ಲದೆ, ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್​ಆ್ಯಪ್/ಎಸ್‌ಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article