ಜೆ ರಾಯ್ ಆತ್ಮಹತ್ಯೆ ಪ್ರಕರಣ: ಮಾನಸಿಕ ಖಿನ್ನತೆ ಕಾರಣ – SIT ವರದಿ

tnit editors
1 Min Read

ಜೆ ರಾಯ್ ಆತ್ಮಹತ್ಯೆ ಪ್ರಕರಣ: ಮಾನಸಿಕ ಖಿನ್ನತೆ ಕಾರಣ – SIT ವರದಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಪೂರ್ಣಗೊಳಿಸಿದೆ. ಈ ಪ್ರಕರಣದಲ್ಲಿ ಮಾನಸಿಕ ಖಿನ್ನತೆಯೇ ಆತ್ಮಹತ್ಯೆಗೆ ಪ್ರಮುಖ ಕಾರಣ ಎಂದು ಎಸ್‌ಐಟಿ ತೀರ್ಮಾನಿಸಿದೆ.

ಆದಾಯ ತೆರಿಗೆ ಅಧಿಕಾರಿಗಳ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದ ಹಿನ್ನೆಲೆ ಸರ್ಕಾರ ಈ ಪ್ರಕರಣವನ್ನು ಎಸ್‌ಐಟಿಗೆ ವಹಿಸಿತ್ತು.

ತನಿಖೆ ವೇಳೆ ಸಿಜೆ ರಾಯ್ ಅವರು ಹಲವು ತಿಂಗಳಿನಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಚಿಕಿತ್ಸೆಯನ್ನೂ ಪಡೆಯುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ. ಆದರೆ ಕೆಲವು ತಿಂಗಳಿಂದ ಚಿಕಿತ್ಸೆ ನಿಲ್ಲಿಸಿದ್ದಲ್ಲದೆ, ಸಾವಿಗೆ ಒಂದು ತಿಂಗಳ ಮುನ್ನ ಔಷಧ ಸೇವನೆ ಕೂಡ ನಿಲ್ಲಿಸಿದ್ದರೆಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಎಸ್‌ಐಟಿ ತಿಳಿಸಿದೆ. ಆತ್ಮಹತ್ಯೆಗೆ ಯಾವುದೇ ಬಾಹ್ಯ ಒತ್ತಡ ಕಾರಣವಾಗಿಲ್ಲ ಎನ್ನುವುದೂ ತನಿಖೆಯಲ್ಲಿ ಸ್ಪಷ್ಟವಾಗಿದೆ. ಖಿನ್ನತೆಗೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ.

ತನಿಖೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸುವ ಸಾಧ್ಯತೆ ಇದೆ.

ಸಿಜೆ ರಾಯ್ ಅವರು ಬೆಂಗಳೂರಿನ ಲ್ಯಾಂಗ್ಫೋರ್ಡ್ ಟೌನ್‌ನಲ್ಲಿರುವ ತಮ್ಮ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಜನವರಿ 30ರಂದು ರಿಚ್ಮಂಡ್ ರಸ್ತೆಯ ಕಚೇರಿಯಲ್ಲಿ ಆದಾಯ ತೆರಿಗೆ ಅಧಿಕಾರಿಗಳ ವಿಚಾರಣೆ ನಡೆಯುತ್ತಿದ್ದ ವೇಳೆ, ತಮ್ಮ ಕೊಠಡಿಗೆ ತೆರಳಿ ಪಿಸ್ತೂಲಿನಿಂದ ಗುಂಡು ಹೊಡೆದು ಆತ್ಮಹತ್ಯೆ ಮಾಡಿಕೊಂಡಿದ್ದರು.

Share This Article