No menu items!
21.9 C
Munich
Tuesday, June 16, 2026

ಕಾರು-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: ಬೆಂಕಿ ಹೊತ್ತಿ ಉರಿದು 6 ಮಂದಿ ಸಜೀವ ದಹನ.!

Must read

ಕಾರು-ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: ಬೆಂಕಿ ಹೊತ್ತಿ ಉರಿದು 6 ಮಂದಿ ಸಜೀವ ದಹನ.!

ಯಾದಗಿರಿ: ಕಾರು ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಕಾರು ಬೆಂಕಿಗೆ ಆಹುತಿಯಾಗಿ, ಅದರಲ್ಲಿದ್ದ ಆರು ಮಂದಿ ಸಜೀವ ದಹನಗೊಂಡ ದಾರುಣ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಬಳಿ ನಡೆದಿದೆ.
ಯಾದಗಿರಿಯಿಂದ ರಾಯಚೂರು ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಬೆಂಗಳೂರಿನಿಂದ ಕಲಬುರಿ ಕಡೆ ಬರುತ್ತಿದ್ದ ಖಾಸಗಿ ಬಸ್ ನಡುವೆ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಕಾರು ಹಾಗೂ ಬಸ್ಗೆ ಬೆಂಕಿ ಹೊತ್ತಿಕೊಂಡಿದ್ದು, ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಕಾರು ಒಳಗಿದ್ದ ಆರು ಮಂದಿ ಬೆಂಕಿಯಲ್ಲಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ನಂತರ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ.
ಸುರಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

- Advertisement -spot_img

More articles

- Advertisement -spot_img

Latest article