No menu items!
20.1 C
Munich
Friday, April 17, 2026

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ

Must read

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಅಪರಾಧಿಗಳಿಗೆ ಕೊನೆಗೂ ಶಿಕ್ಷೆ ಪ್ರಕಟವಾಗಿದೆ. 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ಈ ಪ್ರಕರಣದಲ್ಲಿ ಒಟ್ಟು 21 ಆರೋಪಿಗಳಿದ್ದು, ಅವರಲ್ಲಿ 19 ಮಂದಿಯನ್ನು ನ್ಯಾಯಾಲಯ ದೋಷಿಗಳೆಂದು ಘೋಷಿಸಿದೆ. 15ನೇ ಆರೋಪಿ ಆಗಿರುವ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಜೊತೆಗೆ 19ನೇ ಆರೋಪಿ ಚನ್ನಕೇಶವ ಟಿಂಗರಿಕರ್ ಅವರಿಗೆ 7 ವರ್ಷ ಜೈಲು ಶಿಕ್ಷೆ ನೀಡಲಾಗಿದೆ.
ಪ್ರಕರಣದ ಎ1 ಆರೋಪಿ ಬಸವರಾಜ ಮುತ್ತಗಿ ಅವರನ್ನು ಮಾಫಿ ಸಾಕ್ಷಿಯಾಗಿ ನ್ಯಾಯಾಲಯ ಮಾನ್ಯತೆ ನೀಡಿದೆ. ಇದೇ ವೇಳೆ, ಯೋಗೇಶ್ ಗೌಡ ಅವರ ಮಕ್ಕಳಿಗೆ 16 ಲಕ್ಷ ರೂಪಾಯಿ ಪರಿಹಾರವನ್ನು ನೀಡಲು ನ್ಯಾಯಾಲಯ ಆದೇಶಿಸಿದೆ.
ಈ ತೀರ್ಪು ಕರ್ನಾಟಕ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಕೇಂದ್ರ ಸರ್ಕಾರದ ಪ್ರಜಾ ಪ್ರತಿನಿಧಿ ಕಾಯ್ದೆಯ ಪ್ರಕಾರ, ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವೂ ಕಳೆದು ಹೋಗುವ ಸಾಧ್ಯತೆ ಇದೆ.
ಇದಲ್ಲದೆ, ಇಬ್ಬರು ಆರೋಪಿಗಳು ಮಾಫಿ ಸಾಕ್ಷಿಗಳಾಗಿದ್ದು, ಎ17 ಶಿವಾನಂದ ಅವರು ಮಾಫಿ ಸಾಕ್ಷಿಯಾದ ನಂತರ ಪ್ರತಿಕೂಲ ಹೇಳಿಕೆ ನೀಡಿರುವ ಹಿನ್ನೆಲೆ, ಅವರನ್ನು ಮತ್ತೆ ಆರೋಪಿಯಾಗಿ ಪರಿಗಣಿಸಲು ಸಿಬಿಐ ಅರ್ಜಿ ಸಲ್ಲಿಸಿದೆ.
ಇನ್ನು A20 ವಾಸುದೇವ ನಿಲೇಕಣಿ ಮತ್ತು A21 ಸೋಮಶೇಖರ ಅವರನ್ನು ನ್ಯಾಯಾಲಯ ಬಿಡುಗಡೆ ಮಾಡಿದೆ.
ಉಳಿದ ಆರೋಪಿಗಳಾದ ವಿಕ್ರಮ್, ಕೀರ್ತಿ ಕುಮಾರ್, ಸಂದೀಪ್, ವಿನಾಯಕ್, ಮಹಾಬಲೇಶ್ವರ್ (ಮುದಕ), ಸಂತೋಷ್, ದಿನೇಶ್, ಅಶ್ವಥ್, ಸುನಿಲ್, ನಜೀರ್ ಅಹಮದ್, ಷಾನವಾಜ್, ನೂತನ್, ಹರ್ಷಿತ್, ಚಂದ್ರು ಮಾಮ, ವಿಕಾಸ್ ಕಲಬುರ್ಗಿ ಸೇರಿದಂತೆ ಇತರರನ್ನು ನ್ಯಾಯಾಲಯ ದೋಷಿಗಳೆಂದು ಘೋಷಿಸಿ ಶಿಕ್ಷೆ ವಿಧಿಸಿದೆ.

- Advertisement -spot_img

More articles

- Advertisement -spot_img

Latest article