ಮಹಿಳಾ ಮೀಸಲು ಸೋಲಿನ ನಡುವೆ ಇಂದು ರಾತ್ರಿ ದೇಶವನ್ನು ಉದ್ದೇಶಿಸಿ ಮೋದಿ ಭಾಷಣ
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8:30ಕ್ಕೆ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ ತಿದ್ದುಪಡಿ ಮಸೂದೆಗೆ ಹಿನ್ನಡೆಯಾದ ಬೆನ್ನಲ್ಲೇ ಈ ಭಾಷಣ ನಡೆಯುತ್ತಿರುವುದರಿಂದ ದೇಶದಾದ್ಯಂತ ಕುತೂಹಲ ಹೆಚ್ಚಾಗಿದೆ.
ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪ್ರಮುಖ ಮಸೂದೆಗಳಲ್ಲಿ ಸೋಲು ಕಂಡಿಲ್ಲ. ಆದರೆ ಇದೇ ಮೊದಲ ಬಾರಿಗೆ ಮಹಿಳಾ ಮೀಸಲಾತಿ ಮಸೂದೆಗೆ ಹಿನ್ನಡೆಯಾಗಿರುವ ಹಿನ್ನೆಲೆ, ಈ ಕುರಿತು ಅವರು ಪ್ರತಿಕ್ರಿಯೆ ನೀಡಬಹುದೇ ಎಂಬ ಪ್ರಶ್ನೆ ಉದ್ಭವಿಸಿದೆ.
ಈ ಹಿಂದೆ ನೋಟು ನಿಷೇಧ ಹಾಗೂ ಕೋವಿಡ್ ಸಂದರ್ಭಗಳಲ್ಲಿ ಪ್ರಧಾನಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ್ದರು. ಇಂತಹ ಸಂದರ್ಭಗಳಲ್ಲಿ ಮಹತ್ವದ ಘೋಷಣೆಗಳನ್ನು ಮಾಡುವ ಪರಿಪಾಠವೂ ಇದೆ.
ಇದೀಗ ಅಂತರರಾಷ್ಟ್ರೀಯ ಮಟ್ಟದಲ್ಲೂ ಕೆಲವು ಬೆಳವಣಿಗೆಗಳು ನಡೆಯುತ್ತಿವೆ. ಅಮೆರಿಕ–ಇರಾನ್ ನಡುವಿನ ಉದ್ವಿಗ್ನತೆ ಬಳಿಕ ಶಾಂತಿ ಮಾತುಕತೆಗಳು ಮರುಾರಂಭವಾಗಿರುವ ಹಿನ್ನೆಲೆಯಲ್ಲಿ, ಪ್ರಧಾನಿ ಆ ವಿಷಯಗಳನ್ನೂ ಸ್ಪರ್ಶಿಸುವ ಸಾಧ್ಯತೆ ಬಗ್ಗೆ ಚರ್ಚೆ ನಡೆಯುತ್ತಿದೆ.
ಆದರೆ, ಭಾಷಣದಲ್ಲಿ ಯಾವ ವಿಷಯ ಪ್ರಮುಖವಾಗಿರಲಿದೆ ಎಂಬುದು ಕುರಿತು ಇನ್ನೂ ಸ್ಪಷ್ಟತೆ ಇಲ್ಲ. ಪ್ರಧಾನಿ ಏನು ಹೇಳುತ್ತಾರೆ ಎಂಬುದನ್ನು ದೇಶ ಕಾದು ನೋಡುತ್ತಿದೆ.



