No menu items!
12 C
Munich
Monday, April 20, 2026

ಬಿಟ್ಕಾಯಿನ್ ಹಗರಣ: ಹ್ಯಾರಿಸ್–ನಲಪಾಡ್ ನಿವಾಸಗಳ ಮೇಲೆ ಇಡಿ ದಾಳಿ

Must read

ಬಿಟ್ಕಾಯಿನ್ ಹಗರಣ: ಹ್ಯಾರಿಸ್–ನಲಪಾಡ್ ನಿವಾಸಗಳ ಮೇಲೆ ಇಡಿ ದಾಳಿ

ಬೆಂಗಳೂರು: ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಹಾಗೂ ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಸೋಮವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿ ನಡೆಸಿದೆ.
ನಗರದ ಅಶೋಕನಗರದಲ್ಲಿರುವ ಹ್ಯಾರಿಸ್ ಅವರ ನಿವಾಸ ಮತ್ತು ನಲಪಾಡ್ ಮನೆಯಲ್ಲೂ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬಿಟ್ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.
ಇ.ಡಿ. ಅಧಿಕಾರಿಗಳು ಬೆಂಗಳೂರಿನ ವಿವಿಧ ಭಾಗಗಳಲ್ಲಿ ಸೇರಿ ಒಟ್ಟು 17 ಸ್ಥಳಗಳಲ್ಲಿ ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ನಲಪಾಡ್ ಅವರಿಗೆ ಹ್ಯಾಕರ್ ಶ್ರೀಕಿ ಜೊತೆ ಸಂಪರ್ಕ ಹೊಂದಿದ್ದ ಆರೋಪಗಳು ಈ ಹಿಂದೆ ಕೇಳಿಬಂದಿದ್ದವು.
ಈ ನಂಟಿನ ಹಿನ್ನೆಲೆಯಲ್ಲೇ ದಾಳಿ ನಡೆದಿದೆ ಎನ್ನಲಾಗಿದ್ದು, ಶ್ರೀಕಿ ಮತ್ತು ನಲಪಾಡ್ ನಡುವೆ ಸುಮಾರು 4.5 ಕೋಟಿ ರೂಪಾಯಿ ಅಕ್ರಮ ವ್ಯವಹಾರ ನಡೆದಿದೆ ಎಂದು ಇ.ಡಿ. ಆರೋಪಿಸಿದೆ.
ಈ ಮೊದಲು ರಾಜ್ಯ ಸಿಐಡಿ ಕೂಡ ಬಿಟ್ಕಾಯಿನ್ ಪ್ರಕರಣ ಸಂಬಂಧ ನಲಪಾಡ್ ಅವರನ್ನು ವಿಚಾರಣೆ ನಡೆಸಿತ್ತು. ಸದ್ಯ ಇ.ಡಿ. ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

- Advertisement -spot_img

More articles

- Advertisement -spot_img

Latest article