No menu items!
21.4 C
Munich
Saturday, April 25, 2026

ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೊರೆ ಹೋದ ವಿನಯ್ ಕುಲಕರ್ಣಿ

Must read

ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಮೊರೆ ಹೋದ ವಿನಯ್ ಕುಲಕರ್ಣಿ

ಬೆಂಗಳೂರು/ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ದೋಷಿಗಳಾಗಿ ಶಿಕ್ಷೆಗೆ ಗುರಿಯಾದವರು ಇದೀಗ ಹೈಕೋರ್ಟ್ ಮೊರೆ ಹೋಗಿದ್ದಾರೆ. ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಇಬ್ಬರು ಜೀವಾವಧಿ ಶಿಕ್ಷೆಗೆ ತಡೆಯಾಜ್ಞೆ ಕೋರಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಮತ್ತು ಚಂದ್ರಶೇಖರ್ ಇಂಡಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಜೀವಾವಧಿ ಶಿಕ್ಷೆಯನ್ನು ಅಮಾನತಿನಲ್ಲಿ ಇಡಬೇಕೆಂದು ಮನವಿ ಮಾಡಿದ್ದಾರೆ. ಈ ಅರ್ಜಿ ಸೋಮವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ.
ತೀರ್ಪು ಪ್ರಕಟವಾದ 90 ದಿನಗಳೊಳಗೆ ಶಿಕ್ಷೆಗೆ ತಡೆ ಸಿಗದಿದ್ದರೆ ಶಾಸಕ ಸ್ಥಾನ ಅನರ್ಹವಾಗುವ ಭೀತಿಯಿಂದ ವಿನಯ್ ಕುಲಕರ್ಣಿ ಮೇಲ್ಮನವಿ ಸಲ್ಲಿಸಿರುವುದಾಗಿ ತಿಳಿದುಬಂದಿದೆ.
ಪ್ರಕರಣದ ಹಿನ್ನೆಲೆ:
2016ರಲ್ಲಿ ಧಾರವಾಡ ಜಿಲ್ಲೆಯ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆಯಾಗಿತ್ತು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 21 ಮಂದಿಯ ವಿರುದ್ಧ ಆರೋಪ ಕೇಳಿಬಂದಿತ್ತು. ಬಳಿಕ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿದ್ದು, ಸುದೀರ್ಘ ತನಿಖೆಯ ನಂತರ ಚಾರ್ಜ್ಶೀಟ್ ಸಲ್ಲಿಸಲಾಗಿತ್ತು.
ಸುಮಾರು 10 ವರ್ಷಗಳ ವಿಚಾರಣೆ ಬಳಿಕ, ಕೊಲೆ, ಅಪರಾಧ ಸಂಚು, ಸಾಕ್ಷ್ಯನಾಶ, ಮಾರಕಾಸ್ತ್ರಗಳಿಂದ ಹಲ್ಲೆ ಸೇರಿದಂತೆ ಹಲವು ಆರೋಪಗಳಲ್ಲಿ ದೋಷಿ ಎಂದು ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ನೀಡಿದೆ.
ಈ ವೇಳೆ ಸೋಮಶೇಖರ್ ನ್ಯಾಮಗೌಡ ಮತ್ತು ವಾಸುದೇವ್ ನಿಲೇಕಣಿ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಉಳಿದ ಆರೋಪಿಗಳನ್ನು ಸಿಬಿಐ ವಶಕ್ಕೆ ಪಡೆದು, ವೈದ್ಯಕೀಯ ಪರೀಕ್ಷೆಯ ಬಳಿಕ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.
ನಂತರ ನ್ಯಾಯಾಲಯ ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, ಇನ್ಸ್ಪೆಕ್ಟರ್ ಚನ್ನಕೇಶವ ಟಿಂಕರಿಕರ್ ಅವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.

- Advertisement -spot_img

More articles

- Advertisement -spot_img

Latest article