No menu items!
18.2 C
Munich
Tuesday, April 28, 2026

ಶಾಲೆಗಳಲ್ಲಿ ಪತ್ರಿಕೆ ಓದುವುದು ಕಡ್ಡಾಯ: ವಿದ್ಯಾರ್ಥಿಗಳ ಅಭಿವೃದ್ಧಿಗೆ ಸರ್ಕಾರದ ಮಹತ್ವದ ನಿರ್ಧಾರ

Must read

ಶಾಲೆಗಳಲ್ಲಿ ಪತ್ರಿಕೆ ಓದುವುದು ಕಡ್ಡಾಯ: ವಿದ್ಯಾರ್ಥಿಗಳ ಅಭಿವೃದ್ಧಿಗೆ ಸರ್ಕಾರದ ಮಹತ್ವದ ನಿರ್ಧಾರ

ಬೆಂಗಳೂರು: ಮಕ್ಕಳಲ್ಲಿ ಸಾಮಾನ್ಯ ಜ್ಞಾನ ಹೆಚ್ಚಿಸಲು ಮತ್ತು ಇತ್ತೀಚಿನ ಸುದ್ದಿಗಳ ಬಗ್ಗೆ ಅರಿವು ಮೂಡಿಸಲು ರಾಜ್ಯದ ಸಾರ್ವಜನಿಕ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ.ರಾಜ್ಯದ ಎಲ್ಲಾ ಶಾಲೆಗಳಲ್ಲಿ ದಿನಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸಿ ಅಧಿಕೃತ ಸುತ್ತೋಲೆ ಹೊರಡಿಸಲಾಗಿದೆ. ಪ್ರಾರ್ಥನೆ ಮುಗಿದ ತಕ್ಷಣ ಪ್ರತಿದಿನ 10 ರಿಂದ 15 ನಿಮಿಷಗಳ ಕಾಲ ವಿದ್ಯಾರ್ಥಿಗಳಿಗೆ ಪತ್ರಿಕೆ ಓದಿಸುವುದು ಅನಿವಾರ್ಯವಾಗಿದೆ. ಈ ನಿಯಮವು ಸರ್ಕಾರಿ, ಅನುದಾನಿತ, ಖಾಸಗಿ ಹಾಗೂ ವಸತಿ ಶಾಲೆಗಳು ಸೇರಿದಂತೆ ಎಲ್ಲಾ ರೀತಿಯ ಶಾಲೆಗಳಿಗೆ ಅನ್ವಯವಾಗಲಿದೆ.ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ ಈ ಆದೇಶ ಹೊರಡಿಸಿದೆ. ಈಗಾಗಲೇ ಕೆಲವು ಶಾಲೆಗಳಲ್ಲಿ ಪತ್ರಿಕೆ ಓದುವ ಪದ್ಧತಿ ಇದ್ದರೂ, ಇನ್ನು ಮುಂದೆ ಪ್ರಾರ್ಥನೆಯ ನಂತರ ಪ್ರತ್ಯೇಕವಾಗಿ ಸಮಯ ಮೀಸಲಿಟ್ಟು ಓದಿಸುವಂತೆ ಸೂಚಿಸಲಾಗಿದೆ.ಮಕ್ಕಳನ್ನು ಮೊಬೈಲ್ ಫೋನ್ಗಳ ಅತಿಯಾದ ಬಳಕೆಯಿಂದ ದೂರವಿಡುವುದು, ಓದುವ ಹವ್ಯಾಸ ಬೆಳೆಸುವುದು, ಪ್ರಸ್ತುತ ಘಟನೆಗಳ ಬಗ್ಗೆ ಅರಿವು ಮೂಡಿಸುವುದು ಹಾಗೂ ಭವಿಷ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧಗೊಳಿಸುವುದು ಈ ಕ್ರಮದ ಮುಖ್ಯ ಉದ್ದೇಶಗಳಾಗಿವೆ. ಈ ನಿರ್ಧಾರವು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಶಿಕ್ಷಣ ಇಲಾಖೆ ಅಭಿಪ್ರಾಯಪಟ್ಟಿದೆ.

- Advertisement -spot_img

More articles

- Advertisement -spot_img

Latest article