ಕೌಟುಂಬಿಕ ಕಲಹ: ಬೀರೂರಿನಲ್ಲಿ ಸಬ್ ಇನ್ಸ್ಪೆಕ್ಟರ್ ಪತ್ನಿ ನೇಣಿಗೆ ಶರಣು
ಚಿಕ್ಕಮಗಳೂರು: ಕೌಟುಂಬಿಕ ಕಲಹದಿಂದ ಮನನೊಂದು ಸಬ್ ಇನ್ಸ್ಪೆಕ್ಟರ್ ಪತ್ನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನಲ್ಲಿ ನಡೆದಿದೆ.ಬೀರೂರು ಪೊಲೀಸ್ ಠಾಣೆಯ ಠಾಣಾಧಿಕಾರಿ ತಿಪ್ಪೇಶ್ ಅವರ ಪತ್ನಿ ಪದ್ಮ (34) ಮಂಗಳವಾರ ರಾತ್ರಿ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ತಿಪ್ಪೇಶ್ ಹಾಗೂ ಪದ್ಮ ಪ್ರೀತಿಸಿ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳು ಇದ್ದರು.ಘಟನೆಗೆ ಸಂಬಂಧಿಸಿದಂತೆ ಪದ್ಮ ಅವರ ಮೃತದೇಹವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಕುಟುಂಬಸ್ಥರ ಆಗಮನಕ್ಕಾಗಿ ಕಾಯುತ್ತಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ.ಪ್ರಾಥಮಿಕ ಮಾಹಿತಿ ಪ್ರಕಾರ, ಕೌಟುಂಬಿಕ ಕಲಹವೇ ಈ ದುರ್ಘಟನೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



