No menu items!
17 C
Munich
Saturday, May 2, 2026

ಸಚಿವ ಡಿ.ಸುಧಾಕರ್ ಆರೋಗ್ಯದಲ್ಲಿ ಚೇತರಿಕೆ; ಪ್ರಜ್ಞೆ ಬಂದಿದ್ದು ಶೀಘ್ರ ಗುಣಮುಖರಾಗಲಿದ್ದಾರೆ ಎಂದ ಸಹೋದರ

Must read

ಸಚಿವ ಡಿ.ಸುಧಾಕರ್ ಆರೋಗ್ಯದಲ್ಲಿ ಚೇತರಿಕೆ; ಪ್ರಜ್ಞೆ ಬಂದಿದ್ದು ಶೀಘ್ರ ಗುಣಮುಖರಾಗಲಿದ್ದಾರೆ ಎಂದ ಸಹೋದರ

ಚಿತ್ರದುರ್ಗ/ಬೆಂಗಳೂರು: ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವ ಡಿ. ಸುಧಾಕರ್ ಅವರ ಆರೋಗ್ಯದಲ್ಲಿ ಗಮನಾರ್ಹ ಚೇತರಿಕೆ ಕಂಡುಬಂದಿದೆ ಎಂದು ಅವರ ಸಹೋದರ ಡಿ. ಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನ ಕಿಮ್ಸ್ ಆಸ್ಪತ್ರೆ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಚಿವರಿಗೆ ಪ್ರಜ್ಞೆ ಬಂದಿದ್ದು, ಕಣ್ಣು ತೆರೆದು ನೋಡಿದ್ದಾರೆ ಎಂದು ಮಾಹಿತಿ ನೀಡಿದರು.
“ಡಿ. ಸುಧಾಕರ್ ಅವರು ಶೇ.100ರಷ್ಟು ಗುಣಮುಖರಾಗುವ ವಿಶ್ವಾಸವಿದೆ. ಅವರು ಶೀಘ್ರದಲ್ಲೇ ಚೇತರಿಸಿಕೊಂಡು ಮತ್ತೆ ಹಿರಿಯೂರಿಗೆ ಬಂದು ಜನಸೇವೆಯಲ್ಲಿ ತೊಡಗಿಕೊಳ್ಳಲಿದ್ದಾರೆ. ಕ್ಷೇತ್ರದ ಜನರು ಸೇರಿದಂತೆ ಎಲ್ಲರೂ ಧೈರ್ಯದಿಂದ ಇರಬೇಕು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ,” ಎಂದು ಅವರು ಮನವಿ ಮಾಡಿದರು.
ಡಿ. ಸುಧಾಕರ್ ಅವರು ಮೊಣಕಾಲು ಸಂಬಂಧಿತ ಶಸ್ತ್ರಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆಯ ಬಳಿಕ ಅವರಿಗೆ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಮಣಿಪಾಲ್ ಆಸ್ಪತ್ರೆಯಿಂದ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸಚಿವರ ಆರೋಗ್ಯ ವಿಚಾರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಪ್ರಸ್ತುತ ವೈದ್ಯರ ನಿಗಾದಲ್ಲಿರುವ ಸಚಿವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

- Advertisement -spot_img

More articles

- Advertisement -spot_img

Latest article