No menu items!
24 C
Munich
Monday, May 4, 2026

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿ.ಕೆ. ಶಿವಕುಮಾರ್

Must read

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಕೈ ಹಿಡಿದಿವೆ, ಕೇರಳದಲ್ಲಿ ಅಧಿಕಾರ ನಿರೀಕ್ಷಿತ: ಡಿ.ಕೆ. ಶಿವಕುಮಾರ್ಬೆಂಗಳೂರು: “ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿದಿವೆ. ಜನರ ಕಷ್ಟಕ್ಕೆ ನಮ್ಮ ಸರ್ಕಾರ ಸ್ಪಂದಿಸಿದೆ. ಹೀಗಾಗಿ ಕರ್ನಾಟಕ ಉಪಚುನಾವಣೆಗಳಲ್ಲಿ ಉತ್ತಮ ಫಲಿತಾಂಶ ಬಂದಿದೆ. ಬೇರೆ ರಾಜ್ಯಗಳ ಪೈಕಿ ಕೇರಳದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎನ್ನುವ ವಿಶ್ವಾಸವಿತ್ತು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ರಾಜ್ಯದ ಉಪಚುನಾವಣೆ, ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಮಾಧ್ಯಮಗಳ ಜೊತೆ ಶಿವಕುಮಾರ್ ಅವರು ಸೋಮವಾರ ಮಾತನಾಡಿದರು.ದಾವಣಗೆರೆ ದಕ್ಷಿಣದಲ್ಲಿ ಗೆಲುವಿನ ಅಂತರ 25-30 ಸಾವಿರಕ್ಕಿಂತ ಕಡಿಮೆ ಆಗಿರುವ ಬಗ್ಗೆ ಕೇಳಿದಾಗ, “ಇಷ್ಟೆಲ್ಲಾ ಗೊಂದಲ ಆದಮೇಲೆ 25-30 ಸಾವಿರ ಅಂತರದ ಗೆಲುವು ಸಿಗುವುದಿಲ್ಲ ಎಂಬುದು ಗೊತ್ತಿತ್ತು. ಆದರೆ ಆರಾಮವಾಗಿ ಗೆಲ್ಲುತೇವೆ ಎಂದು ಗೊತ್ತಿತ್ತು. ಎಸ್ ಡಿಪಿಐನಿಂದ ಅಪಾಯವಾಗಿದೆ” ಎಂದರು.ಎಸ್ ಡಿಪಿಐ ಮತಗಳಿಕೆಯ ಬಗ್ಗೆ ಕೇಳಿದಾಗ, “ಅದರ ಬಗ್ಗೆ ಮುಖ್ಯಮಂತ್ರಿಗಳು ಈಗಾಗಲೇ ಮಾತನಾಡಿದ್ದಾರೆ. ನಾನೇನು ಮಾತನಾಡಲು ಹೋಗುವುದಿಲ್ಲ. ಎಸ್ ಡಿಪಿಐ ಅನ್ನು ಹಗುರವಾಗಿ ನಾವು ಪರಿಗಣಿಸಿರಲಿಲ್ಲ. ಅದೂ ಸಹ ರಾಜಕೀಯ ಪಕ್ಷ. ಅವರು ಅಲ್ಪಸಂಖ್ಯಾತರ ಮತ ತೆಗೆದುಕೊಂಡರು” ಎಂದರು. ಚುನಾವಣೆ ಫಲಿತಾಂಶವು ರಾಜ್ಯದಲ್ಲಿ ಏನಾದರೂ ಬದಲಾವಣೆ ತರಲಿದೆಯೇ ಎಂದು ಕೇಳಿದಾಗ, “ನಮ್ಮ ರಾಜ್ಯಕ್ಕೆ ಏನೂ ಆಗುವುದಿಲ್ಲ. ಒಂದಷ್ಟು ಜನಕ್ಕೆ ಸಂತೋಷ, ಒಂದಷ್ಟು ಜನಕ್ಕೆ ಬೇಜಾರು ಆಗಬಹುದು. ಡಬಲ್ ಎಂಜಿನ್ ಸರ್ಕಾರ ಇದ್ದಾಗಲೇ ಅವರಿಗೆ ಏನೂ ಮಾಡಲಿಲ್ಲ” ಎಂದು ಹೇಳಿದರು.ಕೇರಳದಲ್ಲಿ ಯುಡಿಎಫ್ ಮೈತ್ರಿಯ ಗೆಲುವಿನ ಬಗ್ಗೆ ಕೇಳಿದಾಗ, “ಅಲ್ಲಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಾವು ಗೆದ್ದಿದ್ದೆವು. ಎಲ್ ಡಿಎಫ್ 10 ವರ್ಷಗಳ ಕಾಲ ಆಡಳಿತ ನಡೆಸಿದೆ. ಅದಕ್ಕೆ ಜನ ಬದಲಾವಣೆ ಬೇಕು ಎಂದು ಫಲಿತಾಂಶ ನೀಡಿದ್ದಾರೆ. ಪ್ರಚಾರಕ್ಕೂ ಹೋದಾಗಲೂ ಜನ ನಮ್ಮ ಬಗ್ಗೆ ವಿಶ್ವಾಸ ವ್ಯಕ್ತಪಡಿಸುತ್ತಿದ್ದರು” ಎಂದು ಹೇಳಿದರು.

- Advertisement -spot_img

More articles

- Advertisement -spot_img

Latest article