ಜಾತಿ ನಿಂದನೆ ಪ್ರಕರಣ: ಶಾಸಕ ಬಿ.ಪಿ. ಹರೀಶ್ ಬಂಧನಕ್ಕೆ ಕೋರ್ಟ್ ವಾರೆಂಟ್ದಾವಣಗೆರೆ: ಜಾತಿ ನಿಂದನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಶಾಸಕ ಬಿ.ಪಿ. ಹರೀಶ್ ಅವರ ಬಂಧನಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಾರೆಂಟ್ ಜಾರಿ ಮಾಡಿದೆ.ಪ್ರಕರಣದ ವಿಚಾರಣೆಗೆ ನಿರಂತರವಾಗಿ ಗೈರುಹಾಜರಾಗಿದ್ದ ಹಿನ್ನೆಲೆ, ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಬಂಧನ ವಾರೆಂಟ್ ಹೊರಡಿಸಿದ್ದಾರೆ. ಇದೇ ಮೇ 7ರಂದು ಶಾಸಕರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಹರಿಹರ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ಕೋರ್ಟ್ ಸೂಚಿಸಿದೆ.2023ರ ವಿಧಾನಸಭಾ ಚುನಾವಣಾ ಫಲಿತಾಂಶದ ಮರುದಿನ, ದಲಿತ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಈ ಪ್ರಕರಣ ದಾಖಲಾಗಿತ್ತು. ಹರಿಹರದ ಬಿಎಸ್ಪಿ ಮುಖಂಡ ಹನುಮಂತಪ್ಪ ಅವರು ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.ಹೈಕೋರ್ಟ್ ಆದೇಶದ ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಚುರುಕುಗೊಂಡಿದ್ದು, ಮುಂದಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.
ಜಾತಿ ನಿಂದನೆ ಪ್ರಕರಣ: ಶಾಸಕ ಬಿ.ಪಿ. ಹರೀಶ್ ಬಂಧನಕ್ಕೆ ಕೋರ್ಟ್ ವಾರೆಂಟ್



