No menu items!
21.3 C
Munich
Saturday, May 9, 2026

ನಾಳೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಬೆಂಗಳೂರಿನಲ್ಲಿ ಟ್ರಾಫಿಕ್ ಅಲರ್ಟ್

Must read

ನಾಳೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಬೆಂಗಳೂರಿನಲ್ಲಿ ಟ್ರಾಫಿಕ್ ಅಲರ್ಟ್; ಹಲವೆಡೆ ಸಂಚಾರ ಮಾರ್ಗ ಬದಲಾವಣೆಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅವರು ಭಾಗವಹಿಸಲಿರುವ ಕಾರ್ಯಕ್ರಮದ ಸ್ಥಳದ ಸುತ್ತಮುತ್ತ ಸಂಚಾರ ಮಾರ್ಗಗಳಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಬೆಂಗಳೂರು ನಗರ ಸಂಚಾರ ಪೊಲೀಸರು ಹಲವು ರಸ್ತೆಗಳಲ್ಲಿ ತಾತ್ಕಾಲಿಕ ನಿರ್ಬಂಧ ಹಾಗೂ ಪರ್ಯಾಯ ವ್ಯವಸ್ಥೆ ಜಾರಿಗೊಳಿಸಿದ್ದಾರೆ.ಹೆಚ್ಎಎಲ್ ಗೇಟ್ ನಂ.30ರ ಮುಂಭಾಗದಲ್ಲಿ ನಾಳೆ ಬೆಳಗ್ಗೆ 5ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಕಾರ್ಯಕ್ರಮ ನಡೆಯಲಿದ್ದು, ಈ ಅವಧಿಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.ಸಂಚಾರ ನಿರ್ಬಂಧಿತ ರಸ್ತೆಗಳು:ಹೆಚ್ಎಎಲ್ ವಿಮಾನ ನಿಲ್ದಾಣ ಎಕ್ಸಿಟ್ ರಸ್ತೆಯಲ್ಲಿ ಹಳೆ ವಿಮಾನ ನಿಲ್ದಾಣ ರಸ್ತೆಯಿಂದ ಡಿಜಿಸಿಎ ಕಚೇರಿವರೆಗೆ ಎರಡೂ ಬದಿಗಳಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರ ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ.ಹೆಚ್ಎಎಲ್ ವಿಮಾನ ನಿಲ್ದಾಣ ಗೇಟ್ ನಂ.30 ರಸ್ತೆಯಲ್ಲಿ ಅಂಬ್ರೆಲಾ ಜಂಕ್ಷನ್ನಿಂದ ಗೇಟ್ ನಂ.30ರವರೆಗೆ ಎರಡೂ ಬದಿಗಳಲ್ಲಿ ವಾಹನ ಸಂಚಾರಕ್ಕೆ ಅವಕಾಶ ಇರುವುದಿಲ್ಲ.ವಾಹನ ನಿಲುಗಡೆ ನಿಷೇಧಿಸಿರುವ ಪ್ರದೇಶಗಳು:ಹಳೆ ವಿಮಾನ ನಿಲ್ದಾಣ ರಸ್ತೆಯ ಎಸ್.ಡಿ ರಸ್ತೆ ಜಂಕ್ಷನ್ನಿಂದ ಟ್ರಿನಿಟಿ ಜಂಕ್ಷನ್ವರೆಗೆ ಪಾರ್ಕಿಂಗ್ ಸಂಪೂರ್ಣ ನಿಷೇಧಿಸಲಾಗಿದೆ.ಹೆಚ್ಎಎಲ್ ವಿಮಾನ ನಿಲ್ದಾಣ ಗೇಟ್ ನಂ.30 ರಸ್ತೆಯಲ್ಲಿ ಅಂಬ್ರೆಲಾ ಜಂಕ್ಷನ್ನಿಂದ ಗೇಟ್ ನಂ.30ರವರೆಗೆ ವಾಹನ ನಿಲುಗಡೆ ನಿರ್ಬಂಧಿಸಲಾಗಿದೆ.ಹೆಚ್ಎಎಲ್ ವಿಮಾನ ನಿಲ್ದಾಣ ಎಕ್ಸಿಟ್ ರಸ್ತೆಯಲ್ಲಿ ಹಳೆ ವಿಮಾನ ನಿಲ್ದಾಣ ರಸ್ತೆಯಿಂದ ಡಿಜಿಸಿಎ ಕಚೇರಿವರೆಗೆ ಪಾರ್ಕಿಂಗ್ಗೆ ಅವಕಾಶ ಇರುವುದಿಲ್ಲ.ಪಾರ್ಕಿಂಗ್ ವ್ಯವಸ್ಥೆ:ಹೆಚ್ಎಎಲ್ ಟ್ರಾನ್ಸ್ಪೋರ್ಟ್ ಡಿಪಾರ್ಟ್ಮೆಂಟ್ ಪಾರ್ಕಿಂಗ್, ಎಸ್.ಡಿ ರಸ್ತೆ ಜಂಕ್ಷನ್ನಲ್ಲಿ ವ್ಯವಸ್ಥೆ ಮಾಡಲಾಗಿದೆ.ಸಾರ್ವಜನಿಕರಿಗಾಗಿ ಸರ್ ಎಂ.ವಿ. ಕಾಲೇಜು ಮೈದಾನ ಹಾಗೂ ಹೆಚ್ಎಎಲ್ ಬಸ್ ಯಾರ್ಡ್ನಲ್ಲಿ ವಾಹನ ನಿಲುಗಡೆ ವ್ಯವಸ್ಥೆ ಕಲ್ಪಿಸಲಾಗಿದೆ.ನೈಸ್ ರಸ್ತೆಯಲ್ಲೂ ಸಂಚಾರ ನಿರ್ಬಂಧ:ನಾಳೆ ಬೆಳಗ್ಗೆ 9ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನೈಸ್ ರಸ್ತೆಯಲ್ಲೂ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.ಪರ್ಯಾಯ ಮಾರ್ಗ:ತುಮಕೂರು ರಸ್ತೆಯಿಂದ ನೈಸ್ ರಸ್ತೆ ಮೂಲಕ ಕನಕಪುರ ರಸ್ತೆ ಕಡೆಗೆ ತೆರಳುವ ವಾಹನ ಸವಾರರು ಸಿಎಂಟಿಐ ಜಂಕ್ಷನ್ ಬಳಿ ಬಲ ತಿರುವು ಪಡೆದು ರಾಜ್ ಕುಮಾರ್ ಪುಣ್ಯಭೂಮಿ ರಸ್ತೆ ಮೂಲಕ ಸಂಚರಿಸಬೇಕು.ನಗರದ ಒಳಭಾಗದಿಂದ ತುಮಕೂರು ರಸ್ತೆಗೆ ಬಂದು ನೈಸ್ ರಸ್ತೆ ಮೂಲಕ ಕನಕಪುರ ರಸ್ತೆ ಕಡೆಗೆ ತೆರಳುವವರೂ ಇದೇ ಪರ್ಯಾಯ ಮಾರ್ಗ ಬಳಸುವಂತೆ ಸೂಚಿಸಲಾಗಿದೆ.ಸಂಚಾರ ದಟ್ಟಣೆ ತಪ್ಪಿಸಲು ಸಾರ್ವಜನಿಕರು ಮುಂಚಿತವಾಗಿ ಪ್ರಯಾಣ ಯೋಜನೆ ರೂಪಿಸಿಕೊಂಡು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಬೆಂಗಳೂರು ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

- Advertisement -spot_img

More articles

- Advertisement -spot_img

Latest article