No menu items!
6.1 C
Munich
Tuesday, May 12, 2026

NEET UG 2026 ಪರೀಕ್ಷೆ ರದ್ದು; ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಬೆನ್ನಲ್ಲೇ ಕೇಂದ್ರದ ಮಹತ್ವದ ಕ್ರಮ

Must read

NEET UG 2026 ಪರೀಕ್ಷೆ ರದ್ದು; ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಬೆನ್ನಲ್ಲೇ ಕೇಂದ್ರದ ಮಹತ್ವದ ಕ್ರಮ

ನವದೆಹಲಿ: ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET UG) ಮತ್ತೊಮ್ಮೆ ವಿವಾದಕ್ಕೆ ಸಿಲುಕಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ NEET UG 2026 ಪರೀಕ್ಷೆಯನ್ನು ರದ್ದುಪಡಿಸಲಾಗಿದೆ.
ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ, ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವ ಉದ್ದೇಶದಿಂದ ಮೇ 3ರಂದು ನಡೆದಿದ್ದ ಪರೀಕ್ಷೆಯನ್ನು ರದ್ದು ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಮಾದರಿ ಪ್ರಶ್ನೆ ಪತ್ರಿಕೆಯಲ್ಲಿ ಇದ್ದ ಹಲವು ಪ್ರಶ್ನೆಗಳೇ ಮುಖ್ಯ ಪರೀಕ್ಷೆಯಲ್ಲೂ ಕಾಣಿಸಿಕೊಂಡಿದ್ದು, ವಿಶೇಷವಾಗಿ ರಾಜಸ್ಥಾನದಲ್ಲಿ ಪ್ರಶ್ನೆ ಪತ್ರಿಕೆ ದೊಡ್ಡ ಮಟ್ಟದಲ್ಲಿ ಸೋರಿಕೆಯಾಗಿದೆ ಎಂಬ ಆರೋಪಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆ ಮೇ 8ರಂದು ಎನ್ಟಿಎ ಕೇಂದ್ರ ತನಿಖಾ ಸಂಸ್ಥೆಗಳ ಮೂಲಕ ಸ್ವತಂತ್ರ ಪರಿಶೀಲನೆ ನಡೆಸುವಂತೆ ಮನವಿ ಮಾಡಿತ್ತು.
ತನಿಖಾ ಸಂಸ್ಥೆಗಳು ಮತ್ತು ಕಾನೂನು ಜಾರಿ ಅಧಿಕಾರಿಗಳು ಸಲ್ಲಿಸಿದ ವರದಿಯನ್ನು ಆಧರಿಸಿ, ಕೇಂದ್ರ ಸರ್ಕಾರದ ಅನುಮೋದನೆಯೊಂದಿಗೆ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಲಾಗಿದೆ.
ಮೇ 3ರಂದು ದೇಶದಾದ್ಯಂತ ಸುಮಾರು 22 ಲಕ್ಷ ವಿದ್ಯಾರ್ಥಿಗಳು NEET UG 2026 ಪರೀಕ್ಷೆ ಬರೆದಿದ್ದರು. ದೇಶದ ಅತಿದೊಡ್ಡ ಪ್ರವೇಶಾತಿ ಪರೀಕ್ಷೆಗಳಲ್ಲಿ ಒಂದಾದ ನೀಟ್ ಇದೀಗ ಮತ್ತೊಮ್ಮೆ ವಿಶ್ವಾಸಾರ್ಹತೆ ಸಂಕಷ್ಟಕ್ಕೆ ಸಿಲುಕಿದೆ.
ಪ್ರಕರಣದ ಗಂಭೀರತೆಯನ್ನು ಗಮನಿಸಿ ಕೇಂದ್ರ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾದ ಕಾರಣ ಸಂಪೂರ್ಣ ತನಿಖೆ ನಡೆಸಲಾಗುವುದು ಎಂದು ತಿಳಿಸಿದೆ.
ಎನ್ಟಿಎ ತನಿಖೆಗೆ ಸಂಪೂರ್ಣ ಸಹಕಾರ ನೀಡಲಿದ್ದು, ಅಗತ್ಯ ದಾಖಲೆಗಳು, ಡಿಜಿಟಲ್ ಪುರಾವೆಗಳು ಹಾಗೂ ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಗಳನ್ನು ಸಿಬಿಐಗೆ ಒದಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪರೀಕ್ಷೆ ರದ್ದಾದ ಹಿನ್ನೆಲೆ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಹೆಚ್ಚಾಗಿದ್ದು, ಮರುಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಎನ್ಟಿಎ ಸ್ಪಷ್ಟಪಡಿಸಿದೆ.

- Advertisement -spot_img

More articles

- Advertisement -spot_img

Latest article