ಕ್ರೈಮ್ ರಿಪೋರ್ಟರ್ ಮಾಡಿದ್ರು ಮ್ಯೂಸಿಕಲ್ ಲವ್ ಸ್ಟೋರಿ ಮೋಡಿ

Date:

ಆಶಿಕಿ ಸಿನಿಮಾ ತಂಡ ಆಡಿಯೋ ಬಿಡುಗಡೆ ಮಾಡಿದೆ. ನಿನ್ನೆ ಬೆಂಗಳೂರಿನ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಆಡಿಯೋ ಬಿಡುಗಡೆ ಕಾರ್ಯಕ್ರಮ ನಡೆಯಿತು . ನಟ ಅಜಯ್ ರಾವ್, ನಿರ್ದೇಶಕ ಬಹದ್ದೂರ್ ಚೇತನ್, ಸಂಭಾಷಣೆಗಾರ ಮಾಸ್ತಿ ಸೇರಿದಂತೆ ಇಡೀ ಆಶಿಕಿ ಚಿತ್ರತಂಡ ಭಾಗಿಯಾಗಿತ್ತು.

ಈ ವೇಳೆ ಮಾತನಾಡಿದ ಅಜಯ್ ರಾವ್ ಪ್ರಯತ್ನ ಅನ್ನುವುದು ಒಂದು ಯಶಸ್ಸು . ಪ್ರಯತ್ನ ಮಾಡದೆ ಸುಮ್ಮನೆ ಕುಳಿತುಕೊಳ್ಳುವುದು ಯಾವುದಕ್ಕೂ ಸಾರ್ಥಕತೆ ಇರುವುದಿಲ್ಲ. ಮಹಿಳಾ ನಿರ್ದೇಶಕಿಯ ಪ್ರಯತ್ನ , ಸಂದೀಪ್ ತೆರೆಮೇಲೆ ಹೇಗೆ ಕಾಣಿಸುತ್ತಾರೆ. ನಾಯಕನಾಗಿ ಪಾತ್ರ ಹೇಗೆ ಪಾತ್ರ ನಿರ್ವಹಿಸುತ್ತಾರೆ ಅನ್ನೋದನ್ನು ನೋಡೋವುದಕ್ಕೆ ನಾನು ಕಾತುರನಾಗಿದ್ದೆ. ಸಂದೀಪ್ ಅವರ ದೊಡ್ಡ ಜರ್ನಿ ಇಲ್ಲಿಂದ ಸಾಗಲಿ. ನಿರ್ಮಾಪಕರಿಗೆ ದುಡ್ಡು ಬರಲಿ. ನನ್ನ ಸಿನಿಮಾ ಜರ್ನಿಯಲ್ಲಿ ದುಡ್ಡು ಮಾಡಿದ್ದನ್ನು ನೋಡಿದ್ದೇನೆ. ಕಳೆದುಕೊಂಡಿದ್ದನ್ನು ನೋಡಿದ್ದೇನೆ. ನಿರ್ಮಾಪಕರಿಗೆ ಒಳ್ಳೆ ದುಡ್ಡು ಬಂದರೆ ಇಡೀ ಸಿನಿಮಾ ಗೆದ್ದಂತೆ ಎಂದು ತಿಳಿಸಿದರು.

ನಿರ್ದೇಶಕಿ ಜೆ.ಚಂದ್ರಕಲಾ, ಮಹಿಳಾ ನಿರ್ದೇಶಕಿರು ಬಳಹ ಅಪರೂಪ ಅಂತಾ ಎಲ್ಲರೂ ಹೇಳುತ್ತಿದ್ದರು. ಯಾಕೆ ವಿರಳ ಅಂದರೆ. ಮಹಿಳಾ ನಿರ್ದೇಶಕಿಯರನ್ನು ನಂಬಿಕೊಂಡು ಯಾವ ನಿರ್ಮಾಪಕರು ದುಡ್ಡ ಹಾಕುತ್ತಾರೆ. ನಾನು ಇಂಡಸ್ಟ್ರೀಗೆ ಬಂದು ಹದಿನಾರರಿಂದ ಹದಿನೇಳು ವರ್ಷವಾಯ್ತು. ಏನೂ ದಬಾಕೋಕೆ ಆಗಿಲ್ಲ. ನಾನು ಏನಾದರೂ ಪ್ರೋವ್ ಮಾಡಬೇಕು. ನಾವುಗಳು ಅದೇ ಪ್ರಯತ್ನದಲ್ಲಿ ಇದ್ದೇವೆ. ಆಶಿಕಿ ಮ್ಯೂಸಿಕಲ್ ಲವ್ ಸ್ಟೋರಿ ಸಿನಿಮಾ. ಲಿಯೋ ಅದ್ಭುತ ಮ್ಯೂಸಿಕ್ ಕೊಟ್ಟಿದ್ದಾರೆ. ಪ್ರತಿಯೊಬ್ಬರು ಸಿನಿಮಾಗೆ ಸಪೋರ್ಟ್ ಮಾಡಿ ಎಂದರು.

ನಿರ್ಮಾಪಕ ಜಿ ಚಂದ್ರಶೇಖರ್ ಮಾತನಾಡಿ, ಸಿನಿಮಾಗೆ ಪ್ರೋತ್ಸಾಹ ಕೊಟ್ಟ ಎಲ್ಲಾ ಟೆಕ್ನಿಷಿಯನ್ಸ್. ನನ್ನ ಸ್ನೇಹಿತರಿಗೆ ಎಲ್ಲರಿಗೂ ಧನ್ಯವಾದ. ನನ್ನ ಚಿತ್ರದ ಬಗ್ಗೆ ನಾನು ಮಾತಾಡಿದರೆ ಚೆನ್ನಾಗಿರುವುದಿಲ್ಲ. ಜನರು ನೋಡಿ ಮಾತನಾಡಬೇಕು ಎಂದು ತಿಳಿಸಿದರು.

ಜೆ ಚಂದ್ರಕಲಾ(JCK) ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಸಾಕಷ್ಟು ವರ್ಷ ಮಾಧ್ಯಮ ರಂಗದಲ್ಲಿ ಸಿನಿಮಾ ಪತ್ರಕರ್ತರಾಗಿ ಸೇವೆ ಸಲ್ಲಿಸಿರುವ ಸಂದೀಪ್ ಕುಮಾರ್, ಪ್ರದೀಪ್ ರಾಜ್ ನಾಯಕರಾಗಿ ಅಭಿನಯಿಸಿದ್ದು, ನಾಯಕಿಯಾಗಿ ಐಶ್ವರ್ಯ ಸಿಂಧೋಗಿ ಬಣ್ಣ ಹಚ್ಚಿದ್ದಾರೆ. ಗುರುಪ್ರಸಾದ್, ಸುಚೇಂದ್ರ ಪ್ರಸಾದ್, ತುಳಸಿ ಶಿವಮಣಿ, ಪ್ರಮೋದಿನಿ ಹಿರಿಯ ತಾರಾಬಳಗ ಚಿತ್ರದಲ್ಲಿದೆ.

ಮ್ಯೂಸಿಕಲ್ ಲವ್ ಸ್ಟೋರಿ ಜೊತೆಗೆ ತ್ರಿಕೋನ ಪ್ರೇಮಕಥೆ ಹೊತ್ತ ‘ಆಶಿಕಿ’ ಚಿತ್ರದಲ್ಲಿ ಒಟ್ಟು ಏಳು ಹಾಡುಗಳಿದ್ದು, ಪ್ರತಿ ಹಾಡುಗಳು ಡಿಫ್ರೆಂಟ್ ಆಗಿ ಮೂಡಿಬಂದಿವೆ. ಶ್ರೀ ಲಕ್ಷ್ಮೀ ನರಸಿಂಹ ಮೂವೀಸ್ ಬ್ಯಾನರ್ ನಡಿ ಜಿ ಚಂದ್ರಶೇಖರ್ ಬಂಡವಾಳ ಹೂಡಿದ್ದು, ರಾಜರತ್ನ, ನಿತಿನ್ ಅಪ್ಪಿ ಛಾಯಾಗ್ರಾಹಣ, ಲಿಯೋ ಸಂಗೀತ ನಾಗೇಂದ್ರ ಅರಸ್ ಸಂಕಲನ ಚಿತ್ರಕ್ಕಿದೆ. ಇತ್ತೀಚೆಗಷ್ಟೇ ಸೆನ್ಸಾರ್ ಪಾಸಾಗಿರುವ ಆಶಿಕಿ ಸಿನಿಮಾ ದಸರಾಗೆ ತೆರೆಗೆ ಬರಲಿದೆ.

Share post:

Subscribe

spot_imgspot_img

Popular

More like this
Related

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...