ಭೀಕರ ಅಪಘಾತ: KSRTC ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು!

Date:

ಭೀಕರ ಅಪಘಾತ: KSRTC ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು!

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಪಾಲನಜೋಗಹಳ್ಳಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಮೃತ ವ್ಯಕ್ತಿಯನ್ನು ಪಾಲನಜೋಗಹಳ್ಳಿ ನಿವಾಸಿ ಪುರುಷೋತ್ತಮ (29) ಎಂದು ಗುರುತಿಸಲಾಗಿದೆ. ಅವರು ರಾಜಾನುಕುಂಟೆಯ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಪ್ರತಿದಿನದಂತೆ ಬೈಕ್‌ನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

 ದ್ವಿಚಕ್ರ ವಾಹನವನ್ನು ಓವರ್‌ಟೇಕ್ ಮಾಡಲು ಹಿಂಬದಿಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಪುರುಷೋತ್ತಮ ರಸ್ತೆ ಮೇಲೆ ಬಿದ್ದಿದ್ದು, ನಂತರ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಈ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

LPG ಬಿಕ್ಕಟ್ಟು ತೀವ್ರ: ಗ್ಯಾಸ್ ಕೊರತೆಯಿಂದ ಆಟೋ ಚಾಲಕರ ಪರದಾಟ

LPG ಬಿಕ್ಕಟ್ಟು ತೀವ್ರ: ಗ್ಯಾಸ್ ಕೊರತೆಯಿಂದ ಆಟೋ ಚಾಲಕರ ಪರದಾಟ ಹುಬ್ಬಳ್ಳಿ: ಮಧ್ಯಪ್ರಾಚ್ಯದಲ್ಲಿ...

ಬಾಯಿಯ ದುರ್ವಾಸನೆ ಕಾಡುತ್ತಿದೆಯೇ? ಈ ಸುಲಭ ಸಲಹೆಗಳು ನಿಮಗಾಗಿ!

ಬಾಯಿಯ ದುರ್ವಾಸನೆ ಕಾಡುತ್ತಿದೆಯೇ? ಈ ಸುಲಭ ಸಲಹೆಗಳು ನಿಮಗಾಗಿ! ಪ್ರತಿಯೊಬ್ಬರೂ ಬಾಯಿ ಶುಚಿತ್ವದ...

ಸೈಬರ್ ಅಪರಾಧ ನಿಯಂತ್ರಣಕ್ಕೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

ಸೈಬರ್ ಅಪರಾಧ ನಿಯಂತ್ರಣಕ್ಕೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ಬೆಂಗಳೂರು: ಸೈಬರ್ ಅಪರಾಧಗಳನ್ನು...

ಮಹಿಳಾ ಸಹೋದ್ಯೋಗಿಗೆ ಕಿರುಕುಳ ಆರೋಪ: ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್ ಬಂಧನ

ಮಹಿಳಾ ಸಹೋದ್ಯೋಗಿಗೆ ಕಿರುಕುಳ ಆರೋಪ: ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್ ಬಂಧನ ಬೆಂಗಳೂರು: ಮಹಿಳಾ...